ETV Bharat / state

ಕೊರೊನಾ ಮುಕ್ತ ಮೈಸೂರು, ದೇಶಕ್ಕೆ ಮಾದರಿ: ಸಚಿವ ಸುಧಾಕರ್ ಶ್ಲಾಘನೆ

ಮೈಸೂರಿನಲ್ಲಿ ಯಾವುದೇ ಪ್ರಾಣಹಾನಿ ಇಲ್ಲದೇ ಎಲ್ಲ 90 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಈ ಮೂಲಕ ಜಿಲ್ಲೆ ದೇಶಕ್ಕೆ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
author img

By

Published : May 15, 2020, 8:24 PM IST

ಬೆಂಗಳೂರು: ಕೆಂಪು ವಲಯದಲ್ಲಿದ್ದ ಮೈಸೂರು ಕೊರೊನಾ ಮುಕ್ತವಾಗಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹರ್ಷ ವ್ಯಕ್ತಪಡಿಸಿದ್ದಾರೆ.

ಯಾವುದೇ ಪ್ರಾಣಹಾನಿ ಇಲ್ಲದೇ ಎಲ್ಲ 90 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಇದರೊಂದಿಗೆ ಕೆಂಪು ವಲಯದಲ್ಲಿದ್ದ ಮೈಸೂರು ಜಿಲ್ಲೆ ಹಸಿರು ವಲಯದತ್ತ ಹೆಜ್ಜೆ ಹಾಕಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಸರ್ಕಾರ ಕೈಗೊಂಡ ಪರಿಣಾಮಕಾರಿ ಕ್ರಮ, ಜಿಲ್ಲಾಡಳಿತದ ಪರಿಶ್ರಮ ಹಾಗೂ ಮೈಸೂರು ಜಿಲ್ಲೆಯ ಜನತೆಯ ಸಹಕಾರದಿಂದ ಇದನ್ನು ಸಾಧಿಸಲು ಸಾಧ್ಯವಾಗಿದೆ. ಇದಕ್ಕೆ ಕಾರಣರಾದ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಆರಂಭದಲ್ಲಿ ಸೋಂಕಿತರ ಸಂಖ್ಯೆ ಆತಂಕ ಮೂಡಿಸಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಸರ್ಕಾರದ ಸೂಚನೆಗಳನ್ನು ಚಾಚೂ ತಪ್ಪದೇ ಪಾಲಿಸಿದ ಜಿಲ್ಲಾಡಳಿತದ ಪರಿಶ್ರಮ, ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ. ಸೋಮಣ್ಣ ಮತ್ತು ಇದೀಗ ಉಸ್ತುವಾರಿ ಸಚಿವರಾಗಿರುವ ಎ.ಸ್‍ಟಿ. ಸೋಮಶೇಖರ್ ಅವರ ಜವಾಬ್ದಾರಿಯುತ ಕರ್ತವ್ಯ ನಿರ್ವಹಣೆ ಇದಕ್ಕೆ ಕಾರಣ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾ.21ರಂದು ಮೊದಲ ಪ್ರಕರಣ ಪತ್ತೆಯಾಗಿತ್ತು. ನಂತರದ ದಿನಗಳಲ್ಲಿ ನಂಜನಗೂಡಿನ ಜುಬಿಲಂಟ್ ಮೂಲದ ಸೋಂಕಿತನಿಂದ 74 ಮಂದಿಗೆ ಮತ್ತು ಹೊಸದಿಲ್ಲಿ ಪ್ರವಾಸಕ್ಕೆ ತೆರಳಿದ್ದವರಿಂದ 10 ಪಾಸಿಟಿವ್ ಪ್ರಕರಣ ವರದಿಯಾಗಿದ್ದವು. ಮೂವರು ವಿದೇಶದಿಂದ ಹಿಂತಿರುಗಿದ್ದವರಿಗೆ ಹಾಗೂ ಇತರ ಮೂರು ಮಂದಿಗೆ ಬೇರೆ ಕಾಯಿಲೆಗಳಿಂದ ನರಳುತ್ತಿದ್ದವರಲ್ಲೂ ಸೋಂಕು ಪತ್ತೆಯಾಗಿತ್ತು. ಒಂದು ಹಂತದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರ ತಿರುವು ತೆಗೆದುಕೊಳ್ಳುವ ಆತಂಕದ ಸ್ಥಿತಿ ಎದುರಾಗಿತ್ತು. ಆದರೆ, ಅದೆಲ್ಲವನ್ನೂ ಸಮರ್ಥವಾಗಿ ನಿಭಾಯಿಸಲಾಯಿತು ಎಂದಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಏ. 21 ರಂದು ನಂಜನಗೂಡಿನ ಜುಬಿಲಂಟ್ ಫ್ಯಾಕ್ಟರಿ, ನಂಜನಗೂಡು ಪಟ್ಟಣಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಗೆ ಕೆಲ ಸೂಚನೆ ನೀಡಲಾಗಿತ್ತು. ಅದೇ ದಿನ ಉಸ್ತುವಾರಿ ಸಚಿವ ಸೋಮಶೇಖರ್ ಅವರೊಂದಿಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯನ್ನು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಸಿ ಸೋಂಕು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳು, ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಹಾಗೂ ಜಿಲ್ಲೆಯಲ್ಲಿರುವ ಸೌಲಭ್ಯಗಳ ಸ್ಥಿತಿ ಕುರಿತಂತೆ ಮಾಹಿತಿ ಪಡೆದು ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನೂ ನೀಡಲಾಯಿತು. ಇದಲ್ಲದೇ, ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೆ ಎಂಬುದನ್ನು ಸಚಿವ ಸುಧಾಕರ್ ಸ್ಮರಿಸಿದ್ದಾರೆ.

ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಕಟ್ಟುನಿಟ್ಟಾಗಿ ಪ್ರತ್ಯೇಕಿಸಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಒಟ್ಟು 5,332 ಮಂದಿಯನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು. ಬಹುಪಾಲು ಮಂದಿ ಈಗಾಗಲೇ ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. ಇನ್ನೂ 568 ಮಂದಿ ಕ್ವಾರಂಟೈನ್‍ನಲ್ಲಿದ್ದಾರೆ. ಇದಲ್ಲದೇ ಮೈಸೂರು ನಗರ ಮತ್ತು ನಂಜನಗೂಡು ಪಟ್ಟಣಗಳನ್ನು ಹೆಚ್ಚು ಕಡಿಮೆ ಸೀಲ್‍ಡೌನ್ ಮಾಡಲಾಗಿತ್ತು. ಈ ಅವಧಿಯಲ್ಲಿ ಸಾರ್ವಜನಿಕರ ದೈನಂದಿನ ಚಟುವಟಿಕೆಗೆ ನಿರ್ಬಂಧ ಹೇರಲಾಗಿತ್ತು. ಜನತೆ ದೊಡ್ಡ ಮಟ್ಟದಲ್ಲಿ ಸಹಕಾರ ನೀಡಿದ್ದಾರೆ. ಜಿಲ್ಲೆಯ ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ ಮತ್ತು ಇತರ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೂ ಕೋವಿಡ್ ವಿರುದ್ಧದ ಕಾರ್ಯಾಚರಣೆಗೆ ಬಳಸಲಾಯಿತು. ಈ ಎಲ್ಲರ ಪರಿಶ್ರಮ ಸಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಜನತೆಯ ಸಹಕಾರ ಸಿಕ್ಕರೆ ಕೊರೊನಾ ಸೋಂಕು ಹರಡದಂತೆ ಹೆಡೆಮುರಿ ಕಟ್ಟಬಹುದು ಎಂಬುದಕ್ಕೆ ಮೈಸೂರು ಜಿಲ್ಲೆ ನಿದರ್ಶನ. ಇದು ದೇಶಕ್ಕೆ ಮಾದರಿಯಾಗಿದೆ. ಇದಕ್ಕೆ ಕಾರಣರಾದ ಜಿಲ್ಲಾಡಳಿತ, ಚುನಾಯಿತ ಪ್ರತಿನಿಧಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.