ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾ. 10 ರಂದು ನಡೆದ ಧಾರ್ಮಿಕ ಕಾರ್ಯಕ್ರಮವೇ ಕರ್ನಾಟಕದಲ್ಲಿ ಸೋಂಕು ಹೆಚ್ಚಾಗಲು ಕಾರಣವೇ ಎಂಬ ಪ್ರಶ್ನೆ ಕಾಡುತ್ತಿದೆ.
ಇದನ್ನೂ ಓದಿ: ನಿಜಾಮುದ್ದೀನ್ ಗಂಡಾಂತರ: ದೆಹಲಿಯಲ್ಲಿ 24 ಮಂದಿಗೆ ಸೋಂಕು; ಆಯೋಜಕರ ಮೇಲೆ ಕಠಿಣ ಕ್ರಮ
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಅಂದು ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಕರ್ನಾಟಕದಿಂದ ಸುಮಾರು 45 ಮಂದಿ ಭಾಗವಹಿಸಿದ್ದರು ಎಂಬ ಮಾಹಿತಿಯಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿಯು ಇವರಲ್ಲೊಬ್ಬರಾಗಿದ್ದರು. ಹೀಗಾಗಿ, ಪ್ರಾರ್ಥನೆಯಲ್ಲಿ ಭಾಗವಹಿಸಿದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ.
ಹಾಗಾಗಿ ಇವರನ್ನು ಪತ್ತೆ ಮಾಡಿ Home Quarantine ಮಾಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ ಅಂತ ಸಚಿವರು ತಿಳಿಸಿದ್ದಾರೆ. ಇವರಲ್ಲಿ ಈಗಾಗಲೇ 13 ವ್ಯಕ್ತಿಗಳನ್ನು ಪತ್ತೆ ಹಚ್ಚಿ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ನಿಗಾವಹಿಸಲಾಗಿದೆ. ಅಲ್ಲಿಗೆ ಆಸ್ಟ್ರೇಲಿಯಾ, ಸಿಂಗಪುರ್, ದುಬೈ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ ಅವರನ್ನು Quarantine ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.