ಬೆಂಗಳೂರು: ನಗರದ ಹೆಣ್ಣೂರು ಠಾಣೆಯ ಕಾನ್ಸ್ಟೇಬಲ್ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಪರಿಣಾಮ ಇಡೀ ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.
ಹೆಣ್ಣೂರು ಠಾಣೆಯ 32 ವರ್ಷದ ಕಾನ್ಸ್ಟೇಬಲ್ ಸೋಂಕಿತ ವ್ಯಕ್ತಿ. ಈತನಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬೆನ್ನಲೇ ಇಡೀ ಠಾಣೆಗೆ ಬಿಬಿಎಂಪಿ ಅಧಿಕಾರಿಗಳು ಸ್ಯಾನಿಟೈಸರ್ ಸಿಂಪಡಿಸಿ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಇನ್ನೂ ಈತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 8 ಮಂದಿ ಸಿಬ್ಬಂದಿ ಸೇರಿದಂತೆ ಪತ್ನಿ ಹಾಗೂ ಮಗುವನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದು, ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.