ETV Bharat / state

ಪಿಯು ಪರೀಕ್ಷೆ ಬರೆದಿರುವ ವಿದ್ಯಾರ್ಥಿನಿಗೆ ಕೊರೊನಾ ನೆಗೆಟಿವ್​​​: ಸಚಿವ ಸುರೇಶ್‍ ಕುಮಾರ್ - ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ

ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜಯನಗರದ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ ಕುಮಾರ್ ಹೇಳಿದ್ದಾರೆ.

ಸಚಿವ ಸುರೇಶ್‍ಕುಮಾರ್
ಸಚಿವ ಸುರೇಶ್‍ಕುಮಾರ್
author img

By

Published : Jun 20, 2020, 7:26 PM IST

ಬೆಂಗಳೂರು: ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜಯನಗರದ ಕಾಲೇಜಿನ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದ್ದಾರೆ. ಈ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ‘ಕೊರೊನಾ ನೆಗೆಟಿವ್’ ಎಂಬುದು ಸ್ಪಷ್ಟವಾಗಿ ದೃಢಪಟ್ಟಿದೆ ಎಂದು ತಿಳಿಸಿದರು.

ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ವರದಿಗಳ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿದ ಸಚಿವರು, ಈ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಇಂದು ಮಧ್ಯಾಹ್ನ 2.54ಕ್ಕೆ ವರದಿಯನ್ನೂ ಸಹ ಪಡೆಯಲಾಗಿದೆ. ಈ ವರದಿಯಲ್ಲಿ ‘ಕೊರೊನಾ ನೆಗೆಟಿವ್’ ಎಂಬುದು ಸ್ಪಷ್ಟವಾಗಿ ದೃಢಪಟ್ಟಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ ಯಾವುದೇ ಪರೀಕ್ಷಾರ್ಥಿಗಳು ಭಯ ಪಡಬೇಕಾದ ಅಗತ್ಯವಿಲ್ಲ. ಯಾವುದೇ ವಿದ್ಯಾರ್ಥಿ ಕ್ವಾರಂಟೈನ್‍ಗೆ ಒಳಗಾಗಬೇಕಾದ ಅಗತ್ಯವೂ ಇಲ್ಲ ಎಂದು ತಿಳಿಸಿದರು.

ಆ ವಿದ್ಯಾರ್ಥಿನಿಯೂ ಸಹ ಆರೋಗ್ಯದ ದೃಷ್ಟಿಯಿಂದ ಸುರಕ್ಷಿತವಾಗಿದ್ದಾಳೆ. ಆಕೆಯ ತಂದೆ ಈಗಾಗಲೇ ಕ್ವಾರಂಟೈನ್‍ನಲ್ಲಿದ್ದು, ಆರೋಗ್ಯ ಇಲಾಖೆಯ ನಿಗಾದಲ್ಲಿ ಸೂಕ್ತ ಚಿಕಿತ್ಸೆಗೊಳಗಾಗಿದ್ದಾರೆ. ಅವರೂ ಸಹ ಯಾವುದೇ ವಿಶೇಷ ಆರೋಗ್ಯದ ತೊಂದರೆಗೆ ಒಳಗಾಗಿಲ್ಲ ಎಂದರು.

ಇಡೀ ರಾಜ್ಯದಲ್ಲಿ ಪರೀಕ್ಷೆ ಬರೆದ 6 ಲಕ್ಷ ವಿದ್ಯಾರ್ಥಿಗಳ ಹಿತವನ್ನು ಕಾಯ್ದ ಶಿಕ್ಷಣ ಇಲಾಖೆಗೆ ಈ ವಿದ್ಯಾರ್ಥಿನಿಯೋರ್ವಳನ್ನು ಪರೀಕ್ಷಿಸದೇ ಬೇರೊಬ್ಬರಿಗೆ ತೊಂದರೆಯನ್ನುಂಟು ಮಾಡುವಂತಹ ಯಾವುದೇ ಉದ್ದೇಶವಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ನಮ್ಮ ಶಿಕ್ಷಣ ಇಲಾಖೆಯ ಆಸ್ತಿಯಾಗಿದ್ದು, ಅವರ ಹಿತವೇ ನಮ್ಮ ಪ್ರಮುಖ ಆದ್ಯತೆಯಾಗಿದೆ.

Corona Negative for a student
ಪರೀಕ್ಷೆ ವೇಳೆ ನಿರ್ಲಕ್ಷ್ಯ ತೋರಿದ ಸಿಬ್ಬಂದಿಯ ಮೇಲೆ ಶಿಸ್ತಿನ ಕ್ರಮಕ್ಕೆ ಆದೇಶ

ಜೂ. 18ರಂದು ಇಂಗ್ಲಿಷ್​ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸುಮಾರು 6 ಲಕ್ಷ ವಿದ್ಯಾರ್ಥಿಗಳು ಅತ್ಯಂತ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿದ್ದಾರೆ. ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ, ಸಾರಿಗೆ, ಗೃಹ ಇಲಾಖೆಗಳು ಸೇರಿದಂತೆ ರಾಜ್ಯದಲ್ಲಿ ಆಯಾ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಪರೀಕ್ಷೆ ಅಚ್ಚುಕಟ್ಟಾಗಿ ನಡೆದಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆಯಾದ್ದರಿಂದ ಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಮಕ್ಕಳನ್ನು ಮನೆಯಿಂದ ಪರೀಕ್ಷಾ ಕೇಂದ್ರ, ಹಾಗೆಯೇ ಪರೀಕ್ಷಾ ಕೇಂದ್ರದಿಂದ ಮನೆಯವರೆಗೂ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಕರೆ ತರಲಾಗಿತ್ತು ಎಂದು ವಿವರಿಸಿದರು.

ರಾಜ್ಯದ 1,016 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಜಿಲ್ಲಾ ಕೇಂದ್ರದ 430, ತಾಲೂಕು ಕೇಂದ್ರಗಳಲ್ಲಿ 328 ಮತ್ತು ಹೋಬಳಿ ಕೇಂದ್ರಗಳಲ್ಲಿ 258 ಪರೀಕ್ಷಾ ಕೇಂದ್ರಗಳನ್ನು ಸೃಜಿಸಲಾಗಿತ್ತು. ಈ ಪರೀಕ್ಷಾ ಕೇಂದ್ರಗಳಲ್ಲಿ 23,064 ಕೊಠಡಿಗಳನ್ನು ಮುಂಚೆಯೇ ಗುರುತಿಸಿಕೊಳ್ಳಲಾಗಿತ್ತು. ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಹೆಚ್ಚುವರಿಯಾಗಿ 13,528 ಕೊಠಡಿಗಳನ್ನು ಸೇರ್ಪಡೆ ಮಾಡಿ 36,592 ಕೊಠಡಿಗಳನ್ನು ಬಳಸಿಕೊಂಡು ಪರೀಕ್ಷೆ ನಿರ್ವಹಿಸಲಾಗಿದೆ ಎಂದರು.

Corona Negative for a student
ಪಿಯು ಪರೀಕ್ಷೆ ಯಶಸ್ವಿಯಾಗಿ ನಡೆದಿರುವುದಕ್ಕೆ ಸಚಿವ ಸುರೇಶ್​ ಕುಮಾರ್​ ಅಭಿನಂದನೆ

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಉಷ್ಣಾಂಶ ತಪಾಸಣೆ ನಡೆಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ. ಇಡೀ ರಾಜ್ಯದಲ್ಲಿ ಪರೀಕ್ಷಾ ಸಂದರ್ಭದಂದು ಜ್ವರ, ನೆಗಡಿಯಂತಹ ಅನಾರೋಗ್ಯಕ್ಕೆ ಒಳಗಾದ 20 ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿತ್ತು. ಅದೇ ರೀತಿ ರಾಜ್ಯಾದ್ಯಂತ ಒಟ್ಟು 223 ವಿದ್ಯಾರ್ಥಿಗಳು ಕಂಟೈನ್‍ಮೆಂಟ್ ವಲಯಗಳಿಂದ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ತಿಳಿಸಿದರು.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದು ಸ್ಪಷ್ಟ ನಿರ್ದೇಶನಗಳನ್ನು ಪರೀಕ್ಷಾ ಪೂರ್ವದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರುಗಳಿಗೆ ನೀಡಲಾಗಿದ್ದು, ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಈಗಾಗಲೇ ಸೂಚನೆ ನೀಡಿದ್ದೇನೆ. ಅದೇ ರೀತಿ ಇಂಗ್ಲಿಷ್​​ ಭಾಷಾ ಪರೀಕ್ಷೆಯ ದಿನದಂದು ಕಂಡು ಬಂದ ನ್ಯೂನತೆಗಳನ್ನು ಅವಕಾಶಗಳನ್ನಾಗಿ ಬಳಸಿಕೊಂಡು ಜೂನ್ 25ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ಈ ರೀತಿಯ ಯಾವುದೇ ಸಮಸ್ಯೆಗಳು ಎದುರಾಗದ ರೀತಿಯಲ್ಲಿ ಎಲ್ಲಾ ಕ್ರಮಗಳನ್ನು ಅನುಸರಿಸಲು ಈಗಾಗಲೇ ಇಲಾಖಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಪೋಷಕರು ಕ್ವಾರಂಟೈನ್ ಇದ್ದರೆ ವಿನಾಯಿತಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿಯ ಪೋಷಕರು, ಜೊತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೊರೊನಾ ಹಿನ್ನೆಲೆ ಕ್ವಾರಂಟೈನ್‍ಗೆ ಒಳಗಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ಪೂರ್ವಭಾವಿಯಾಗಿ ಪತ್ತೆ ಹಚ್ಚಿ ಇಲಾಖೆಯ ದಾಖಲೆ/ದತ್ತಾಂಶಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯ್ತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ದೊರಕಿಸುವಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ 200 ಮಕ್ಕಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಸ್ಥಾಪಿಸಲಾಗುತ್ತದೆ. ಪ್ರತೀ ವಿದ್ಯಾರ್ಥಿ ತಲಾ 2 ಮಾಸ್ಕ್​ಗಳನ್ನು ಪಡೆಯಲಿದ್ದಾರೆ. ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಕಾಯ್ದಿರಿಸಿದ ಪರೀಕ್ಷಾ ಕೇಂದ್ರಗಳಾಗಿ ಜಾರಿಯಲ್ಲಿಡಲಾಗುತ್ತದೆ. ಈಗಾಗಲೇ ಹೇಳಿದಂತೆ ರಾಜ್ಯದ ವಿವಿಧ ಇಲಾಖೆಗಳು ಸಂಪೂರ್ಣ ಸಮನ್ವಯದೊಂದಿಗೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಮಾಜಕ್ಕೆ ಒಂದು ಭರವಸೆ ನೀಡುವ ನಿಟ್ಟಿನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ನಿರ್ವಹಿಸಲಿವೆ. ಈ ಬಗ್ಗೆ ಯಾವ ಅಪನಂಬಿಕೆಯೂ ಬೇಡ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.