ETV Bharat / state

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೂ ಕೊರೊನಾ - Bangalore Corona positive News

ಮಾಸಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೊನಾ ಅಂಟಿಕೊಂಡಿದೆ. ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಸಿಎಂ ಯಡಿಯೂರಪ್ಪ ಕೂಡ ಅದೇ ಆಸ್ಪತ್ರೆಗೆ ದಾಖಲಾಗಿ ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿದ್ದರಾಮಯ್ಯಗೂ ಕೊರೊನಾ
ಸಿದ್ದರಾಮಯ್ಯಗೂ ಕೊರೊನಾ
author img

By

Published : Aug 4, 2020, 9:00 AM IST

ಬೆಂಗಳೂರು: ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೂಡ ಕೋವಿಡ್-19 ದೃಢಪಟ್ಟಿದೆ.

ಟ್ವೀಟ್ ಮೂಲಕ ಸಿದ್ದರಾಮಯ್ಯ ಅವರೇ ಈ ವಿಚಾರವನ್ನು ತಿಳಿಸಿದ್ದು, ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

  • ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.

    ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.

    — Siddaramaiah (@siddaramaiah) August 4, 2020 " class="align-text-top noRightClick twitterSection" data=" ">

ಸಿದ್ದರಾಮಯ್ಯ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಕೂಡ ಟ್ವೀಟ್ ಮಾಡಿದ್ದು, ನಿನ್ನೆ ಬೆಳಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆ್ಯಂಟಿಜೆನ್​ ಟೆಸ್ಟ್ ಮಾಡಲಾಗಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಸಿಎಂ ಬಿಎಸ್ ಯಡಿಯೂರಪ್ಪ ಕೂಡಾ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಸಿದ್ದರಾಮಯ್ಯ ಕೂಡ ಅದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನಷ್ಟೇ ವೈದ್ಯರು ತಿಳಿಸಬೇಕಿದೆ.

ನಿನ್ನೆ ರಾತ್ರಿ 11.30ಕ್ಕೆ ಪತ್ನಿಯ ಜೊತೆ ಮಣಿಪಾಲ್ ಆಸ್ಪತ್ರೆಗೆ ಆಗಮಿಸಿ ತಪಾಸಣೆಗೆ ಒಳಗಾಗಿದ್ದ ಸಿದ್ದರಾಮಯ್ಯ ಅಲ್ಲಿಯೇ ದಾಖಲಾಗಿದ್ದರು. ಪುತ್ರ ಯತೀಂದ್ರ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದರು. ಉರಿಮೂತ್ರ ದಿಂದ ಉಂಟಾದ ಜ್ವರದ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ, ಕೊರೊನಾ ಟೆಸ್ಟ್​ ಮಾಡಲಾಗಿದ್ದು, ಕೋವಿಡ್-19 ದೃಢಪಟ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.