ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೂಡ ಕೊರೊನಾ ಭೀತಿ ಎದುರಾಗಿದ್ದು, ಲೇಡಿ ಕಾನ್ಸ್‌ಟೇಬಲ್ ಒಬ್ಬರ ಪತಿಗೆ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿಯನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಇಂದಿನ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಲೇಡಿ ಪೊಲೀಸ್ ಕಾನ್ಸ್‌ಟೇಬಲ್ ಪತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಲೇಡಿ ಪೊಲೀಸ್ ಕಾನ್ಸ್‌ಟೇಬಲ್ ಕಳೆದ ಹಲವು ದಿನಗಳಿಂದ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಹಾಗಾಗಿ ಗೃಹ ಕಚೇರಿ ಕೃಷ್ಣಾವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದ್ದು, ಯಾರೊಬ್ಬರಿಗೂ ಇಂದು ಕೃಷ್ಣಾ ಪ್ರವೇಶಕ್ಕೆ ಅವಕಾಶ ಕಲ್ಪಿಸಿಲ್ಲ, ಇಂದು ನಿಗದಿಯಾಗಿದ್ದ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರ ಮಾಡಲಾಗಿದೆ.