ಬೆಂಗಳೂರು: ರಾಜ್ಯದಲ್ಲಿಂದು 17,955 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,287 ಮಂದಿಗೆ ಸೋಂಕು ದೃಢಪಟ್ಟಿದೆ. 1,531 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,57,643 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ ಸೋಂಕಿಗೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 10,859ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 7.16 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 5.93 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 6,78,19,876. ವಾರದ ಸಾವಿನ ಪ್ರಮಾಣ ಶೇ. 0.11 ರಷ್ಟಿದೆ.
ವಿಮಾನ ನಿಲ್ದಾಣದಿಂದ ತಪಾಸಣೆಗೆ 9,557 ಒಳಗಾಗಿದ್ದು, ಇದುವರೆಗೂ 13,07,493 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 992 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,37,060 ಕ್ಕೆ ಏರಿಕೆ ಆಗಿದೆ.
1,262 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದುವರೆಗೂ 18,11,760 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸಕ್ರಿಯ ಪ್ರಕರಣಗಳು 8,325 ಇವೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,974 ರಷ್ಟಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ