ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದಲ್ಲಿ 250 ಕೊರೊನಾ ಶಂಕಿತರ ಮಾದರಿಗಳ ಪರೀಕ್ಷೆ ನಡೆಯುತ್ತಿದೆ. ಅದನ್ನು 1000ಕ್ಕೆ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದರು.
ಈ ಕುರಿತು ಪಶ್ಚಿಮ ವಲಯದ ಕೋವಿಡ್ ಉಸ್ತುವಾರಿ ಹಾಗೂ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಇರೋಫಿನ್ಸ್ ಕ್ಲಿನಿಕಲ್ ಜೆನೆಟಿಕ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಧಾಂಶು ಶ್ರೀವಾತ್ಸವ ಅವರ ಜೊತೆ ಮಾತುಕತೆ ನಡೆಸಿದರು.
ಇರೋಫಿಕ್ಸ್ ಸಂಸ್ಥೆ ಮಾದರಿಗಳ ಪರೀಕ್ಷೆ ಸಾಮರ್ಥ್ಯವನ್ನು 250 ರಿಂದ 1000ಕ್ಕೆ ಹೆಚ್ಚಿಸಿಕೊಂಡಿದ್ದು, ನಾಳೆಯಿಂದಲೇ ಹೆಚ್ಚುವರಿ ಪರೀಕ್ಷೆ ನಡೆಸುವ ಕೆಲಸ ಮಾಡಲಿದೆ. ಪಶ್ಚಿಮ ವಲಯದಲ್ಲಿ 6 ವಿಧಾನಸಭಾ ಕ್ಷೇತ್ರಗಳಿವೆ. ತಲಾ 150 ಮಾದರಿಗಳನ್ನು ಹೆಚ್ಚುವರಿಯಾಗಿ ಪರೀಕ್ಷೆ ಮಾಡಲಾಗುವುದು. ಇದು ತ್ವರಿತವಾಗಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದು ಡಿಸಿಎಂ ಅಭಿಪ್ರಾಯಪಟ್ಟರು.
ಈ ವೇಳೆ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಚಿದಾನಂದ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.