ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇನ್‌ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಒಂದು ವಾರದ ಹಿಂದೆ ಮೂರು ದಿನಗಳ ಕಾಲ ಆಯುಕ್ತರ ಕಚೇರಿ ಸೀಲ್ ಡೌನ್ ಮಾಡಲಾಗಿತ್ತು. ಸೀಲ್ ಡೌನ್ ತೆರವು ಬಳಿಕ ಮೊದಲ ಬಾರಿಗೆ ಆಯುಕ್ತರ ಕಚೇರಿಯಂಗಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಕೊರೊನಾ ಪರೀಕ್ಷೆಗಾಗಿ ಸ್ವ್ಯಾಬ್ ಕಲೆಕ್ಟ್ ಮಾಡಲಾಯಿತು.
ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಪೊಲೀಸ್ ಇಲಾಖೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣಕ್ಕೆ ಟೆಸ್ಟ್ ನಡೆಸಲಾಗುತ್ತಿದೆ. ಇಂದು 18 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಎಲ್ಲರನ್ನೂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.