ಬೆಂಗಳೂರು: ರಾಜ್ಯದಲ್ಲಿಂದು 707 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿಢೀರ್ ಏರಿಕೆಯಾಗಿದೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಇಂದು 252 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8223 ಇದೆ. ಈವರೆಗೆ ಒಟ್ಟು 29,59,926 ಮಂದಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 30,06,505 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 38,327 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಕೋವಿಡ್ ಪ್ರಕರಣಗಳಲ್ಲಿ ಏರಿಕೆ:
ಬೆಂಗಳೂರಿನಲ್ಲಿ 565 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ, ಹಾಗೆ ಮೂವರು ಮೃತಪಟ್ಟಿದ್ದಾರೆ. ನಗರದಲ್ಲಿ 6,846 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ನಿನ್ನೆ 400, ಎರಡು ದಿನದ ಹಿಂದೆ 269 ಪ್ರಕರಣಗಳು ದೃಢಪಟ್ಟಿದ್ದವು. ಮೈಕ್ರೋ ಕಂಟೈನ್ ಮೆಂಟ್ ಗಳ ಸಂಖ್ಯೆ 100 ರ ಗಡಿ ದಾಟಿದೆ.