ETV Bharat / state

ನಾಳೆಯಿಂದ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ: ಸಚಿವ ಆರ್​.ಅಶೋಕ್​​ - ಸಚಿವ ಆರ್​. ಅಶೋಕ್

ಹೋಂ ಕ್ವಾರಂಟೈನ್​​​​ನಲ್ಲಿರುವ ವ್ಯಕ್ತಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದು, ಮೊಬೈಲ್​​​ಗಳನ್ನು ಮನೆಯಲ್ಲಿಟ್ಟು ಹೊರಗೆ ಅಡ್ಡಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

Corona treatment at a private hospital
ಕಂದಾಯ ಸಚಿವ ಆರ್​. ಅಶೋಕ್
author img

By

Published : Jun 22, 2020, 3:29 PM IST

ಬೆಂಗಳೂರು: ನಾಳೆಯಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು. ಇಂದು ಸಂಜೆ ಚಿಕಿತ್ಸೆಗೆ ದರ ನಿಗದಿ ಮಾಡಲಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್​ವೈ ನೇತೃತ್ವದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅವರು, ನಗರದ ಕೆ.ಆರ್. ಮಾರುಕಟ್ಟೆಯನ್ನು ಬಂದ್ ಮಾಡಬೇಕು ಹಾಗೂ ಕೊರೊನಾ ಸಂಖ್ಯೆ ಹೆಚ್ಚಿರುವ ವಾರ್ಡ್​​​​ಗಳಲ್ಲಿ 10 ದಿನ ಸೀಲ್ ಡೌನ್ ಜಾರಿಗೊಳಿಸುವುದರ ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಹೋಂ ಕ್ವಾರಂಟೈನ್​ನಲ್ಲಿರುವ ವ್ಯಕ್ತಿಗಳು ರಂಗೋಲಿ ಕೆಳಗೆ ನುಸುಳುತ್ತಿದ್ದು, ಮೊಬೈಲ್​​​ಗಳನ್ನು ಮನೆಯಲ್ಲಿಟ್ಟು ಹೊರಗೆ ಅಡ್ಡಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲು ಸೂಚನೆ ನೀಡಲಾಗಿದೆ ಎಂದರು. ಸರ್ಕಾರಿ ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್​​​​​​ಗಳ ಕೊರತೆ ಎದುರಾಗಬಾರದು ಎನ್ನುವ ಕಾರಣಕ್ಕೆ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ಸಭೆ ಕರೆದು ಚರ್ಚೆ ನಡೆಸಲಾಗುತ್ತದೆ. ನಾಳೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಘಟಕ ಆರಂಭಿಸಲು ಸೂಚನೆ ನೀಡಿದ್ದೇವೆ ಎಂದರು.

ಕಂದಾಯ ಸಚಿವ ಆರ್​.ಅಶೋಕ್

ಸಾಂಸ್ಥಿಕ ಕ್ವಾರಂಟೈನ್​​​​ಗಳಲ್ಲಿ ಮೂಲ ಸೌಕರ್ಯದ ಕೊರತೆ ಬಗ್ಗೆ ದೂರು ಬಂದಿವೆ. ಹಾಗಾಗಿ ಅಲ್ಲಿ ನೀರು, ಶೌಚಾಲಯ ಸೇರಿದಂತೆ ಇತರ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದರು. ಬೆಂಗಳೂರಿನಲ್ಲಿ ಇನ್ನೂ ಹೆಚ್ಚಿನ ಕ್ರಮಕ್ಕೆ ಬಿಬಿಎಂಪಿಗೆ ಸೂಚನೆ ನೀಡಿದ್ದೇವೆ. ವಾರ್ಡ್ ಮಟ್ಟದಲ್ಲಿ ಕೋವಿಡ್ ಬರುತ್ತಿದೆ. ಹಾಗಾಗಿ ವಾರ್ಡ್ ಮಟ್ಟದಲ್ಲೇ ಅಧಿಕಾರಿಗಳ ತಂಡ ರಚನೆ ಮಾಡಲಾಗುತ್ತದೆ ಎಂದರು.

ವಾರ್ ರೂಂನಲ್ಲಿ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ ಇವೆ ಎನ್ನುವ ಮಾಹಿತಿ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಾ ಅಧಿಕಾರಿಗಳಿಗೂ ಈ ಮಾಹಿತಿ ಸಿಗಲಿದೆ. ಪಾಸಿಟಿವ್ ಬಂದ ಪ್ರಕರಣಗಳನ್ನು ದಾಖಲಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಕೆ.ಆರ್‌ ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಬೆಂಗಳೂರಿನ ಐದು ವಾರ್ಡ್​​​ಗಳ ಕೆಲ ಸ್ಟ್ರೀಟ್​​​​ಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ. ಚಿಕ್ಕಪೇಟೆ, ಚಾಮರಾಜನಗರ ವ್ಯಾಪ್ತಿಯ ಸಿದ್ದಾಪುರ, ವಿ.ವಿ. ಪುರ, ಕಲಾಸಿಪಾಳ್ಯ, ಧರ್ಮರಾಯಗುಡಿ, ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಲಾಕ್​​​ಡೌನ್ ಜಾರಿಗೆ ತರುತ್ತಿದ್ದು, ಅಲ್ಲಿನ ಮಾರುಕಟ್ಟೆಗಳನ್ನು ಬಂದ್ ಮಾಡಲಾಗುತ್ತದೆ ಎಂದರು.

ರಾಜ್ಯದ ಯಾದಗಿರಿ, ಬಳ್ಳಾರಿ, ಕಲಬುರಗಿಯಲ್ಲಿ ಜಾಸ್ತಿ ಸಂಖ್ಯೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಬರುತ್ತಿದ್ದು, ಅಲ್ಲಿಯೂ ಕೆಲ ಭಾಗ ಲಾಕ್​​ಡೌನ್ ಮಾಡಲಾಗುತ್ತದೆ ಎಂದರು. ಇಷ್ಟು ದಿನ ಕೊರೊನಾ ಪಾಸಿಟಿವ್ ಬಂದಲ್ಲಿ ಆ ನಿವಾಸದ ಅಕ್ಕಪಕ್ಕದ ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿತ್ತು. ಆದರೆ ಈಗ ಆ ಮನೆಯ ಹಿಂದೆ ಮುಂದೆ ಇರೋ ರಸ್ತೆಗಳನ್ನೂ ಸೀಲ್ ಡೌನ್ ಮಾಡಲಾಗುತ್ತದೆ ಎಂದರು.

ಪ್ರತಿ ವಾರ್ಡ್​​​​ಗಳಲ್ಲಿ ಫೀವರ್ ಕ್ಲಿನಿಕ್ ತೆರೆಯಲಾಗುತ್ತದೆ. ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆದರೂ ಎಸ್ಎಸ್ಎ​​ಲ್​ಸಿ ಪರೀಕ್ಷೆಗೆ ತೊಂದರೆ ಇಲ್ಲ. ಶಿಕ್ಷಣ ಇಲಾಖೆ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.