ETV Bharat / state

ರಾಜ್ಯದಲ್ಲಿಂದು 3,014 ಕೊರೊನಾ ಪ್ರಕರಣಗಳು ಪತ್ತೆ..

author img

By

Published : Oct 31, 2020, 6:09 PM IST

Updated : Oct 31, 2020, 7:34 PM IST

ಕರ್ನಾಟಕದಲ್ಲಿ ಇಂದು ಹೊಸದಾಗಿ 3,014 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸತತ 17ನೇ ದಿನವೂ ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳನ್ನು ಮೀರಿಸಿದೆ..

corona update in karnataka
ಕೊರೊನಾ ಪ್ರಕರಣಗಳು

ಬೆಂಗಳೂರು : ರಾಜ್ಯದಲ್ಲಿ ಇಂದು 3,014 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿವೆ. 7,468 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದು, ಈ ಮೂಲಕ ಸತತ 17ನೇ ದಿನವೂ ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳನ್ನು ಮೀರಿಸಿದೆ ಎಂದು ತಿಳಿಸಿದ್ದಾರೆ.

ಮಾಸ್ಕ್ ಧರಿಸುವುದು, ಕೈತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ವಿರುದ್ಧದ ನಮ್ಮ ಹೋರಾಟವನ್ನು ಮುಂದುವರೆಸೋಣ ಎಂದು ಸಚಿವರು ತಿಳಿಸಿದ್ದಾರೆ.

ನಗರದಲ್ಲಿಂದು 1621 ಕೊರೊನಾ ಪಾಸಿಟಿವ್- 17 ಮಂದಿ ಬಲಿ
ಬೆಂಗಳೂರು ನಗರದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 1621 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 3,36,469 ಕ್ಕೆ ಏರಿಕೆಯಾಗಿದೆ. ಇಂದು 4679 ಮಂದಿ ಗುಣಮುಖರಾಗಿದ್ದು, ಈವರೆಗೆ 2,98,145 ಮಂದಿ ಬಿಡುಗಡೆ ಹೊಂದಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 34,459 ಕ್ಕೆ ಏರಿಕೆಯಾಗಿದೆ. ಇಂದು 17 ಮಂದಿ ಮೃತಪಟ್ಟಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,864 ಕ್ಕೆ ಏರಿಕೆಯಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 461 ಕ್ಕೆ ಏರಿಕೆಯಾಗಿದೆ.

Last Updated : Oct 31, 2020, 7:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.