ಬೆಂಗಳೂರು: ಸಾವಿರಾರು ಜನರ ಪ್ರಾಣಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಪೊಲೀಸರು ಮಾಸ್ಕ್ ಧರಿಸುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಕೊರೊನಾ ವೈರಸ್ ಕುರಿತಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸುತ್ತಿದ್ದಂತೆ ನಗರದ ಪೊಲೀಸರು ಆರೋಗ್ಯದ ಬಗ್ಗೆ ಸ್ವಯಂ ಪ್ರೇರಿತವಾಗಿ ಮುಂಜಾಗ್ರತಾ ಕ್ರಮಕೈಗೊಂಡಿದ್ದಾರೆ. ನಮ‌್ಮ ಸುರಕ್ಷತೆಯೇ ನಮ್ಮ ಆದ್ಯತೆ ಎಂಬ ಹೆಸರಿನಲ್ಲಿ ಪೊಲೀಸರು ಸಾರ್ವಜನಿಕರಿಗೂ ಆರೋಗ್ಯ ಬಗ್ಗೆ ಕಾಳಜಿ ಮಾಡಲು ಪ್ರೇರೇಪಿಸುತ್ತಿದ್ದಾರೆ.
ಇದಕ್ಕೆ ಪೂರಕವಾಗಿ ಬಾಣಸವಾಡಿ ಠಾಣೆಯ ಎಲ್ಲಾ ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸಿ ದಿನನಿತ್ಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಮಾಸ್ಕ್ ಧರಿಸಿ ಕಾರ್ಯನಿರ್ವಹಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿದೆ.