ಬೆಂಗಳೂರು : ನಗರದಲ್ಲಿಂದು 2147 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 69,572ಕ್ಕೆ ಏರಿಕೆಯಾಗಿದೆ.
ಇಂದು 1131 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 35,063 ಜನರು ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 33,308ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಇಂದು 22 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 1200 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. 326 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.