ಬೆಂಗಳೂರು: ಕೊರೊನಾ ವಾರಿಯರ್ಸ್ರಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗಿರುವ ಘಟನೆ ನಗರದ ಕಾಟಲ್ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆಯುಧಪೂಜೆ ಸಂಭ್ರಮದಲ್ಲಿದ್ದ ಸಿಬ್ಬಂದಿ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತು ಒಟ್ಟಾಗಿ ಪಾಲ್ಗೊಂಡಿದ್ದರು.
ರಸ್ತೆ ಬ್ಲಾಕ್ ಮಾಡಿ ಫೋಟೋ ಶೂಟ್ ಮಾಡಿಕೊಂಡಿದ್ದಾರೆ. ಈ ಮೂಲಕ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿದ್ದಾರೆ.
ಕೋವಿಡ್ ವ್ಯಾಪಿಸುತ್ತಿರುವ ಈ ಸಮಯದಲ್ಲಿ ನಿಯಮ ಪಾಲಿಸುವಂತೆ ಕೇಂದ್ರ, ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿವೆ. ಅಲ್ಲದೆ, ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ವಾರಿಯರ್ಸ್ರನ್ನೂ ನೇಮಿಸಿದೆ. ಇಂಥ ಸಂದರ್ಭದಲ್ಲಿ ಪೊಲೀಸರೇ ನಿಯಮ ಉಲ್ಲಂಘಿಸಿರೋದು, ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗೆ ಒಳಗಾಗಿದೆ. ಸಾಮಾನ್ಯರಿಗೊಂದು ನ್ಯಾಯ, ಪೊಲೀಸರಿಗೆ ಒಂದು ನ್ಯಾಯನಾ? ಅಂತಾ ಜನತೆ ಪ್ರಶ್ನಿಸುತ್ತಿದ್ದಾರೆ.