ETV Bharat / state

ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ಕಾಲಿಟ್ಟ ಕೊರೊನಾ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿ ದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ.

ಕೊರೊನಾ
ಕೊರೊನಾ
author img

By

Published : Apr 6, 2020, 11:57 PM IST

ಹೊಸಕೋಟೆ: ನವದೆಹಲಿಯಲ್ಲಿ ಮಾರ್ಚ್ 13ರಿಂದ 18ರವರೆಗೆ ನಡೆದ ತಬ್ಲಿಘಿ ಜಮಾತ್​ನಲ್ಲಿ ಭಾಗವಹಿಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವ್ಯಕ್ತಿಯಲ್ಲಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಈ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೂ ಕೊರೊನಾ ವೈರಸ್ ಕಾಲಿಟ್ಟಿದೆ. ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದ 43 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಪ್ರಸ್ತುತ ಈ ವ್ಯಕ್ತಿ ಬೆಂಗಳೂರು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವ್ಯಕ್ತಿಯನ್ನು ಮಾರ್ಚ್ 31ರಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಹೋಂ ಕ್ವಾರಂಟೈನ್​ಗೆ ಸೂಚಿಸಲಾಗಿತ್ತು. ನಂತರ ಏಪ್ರಿಲ್ 5ರಂದು ರಕ್ತ ಪರೀಕ್ಷೆ ಮಾಡಿದಾಗ ಈ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.