ಬೆಂಗಳೂರು: ಶಂಕಿತ ಕೊರೊನಾ ವೈರಸ್ನಿಂದ ಕಲಬುರಗಿಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಕಲಬುರಗಿಯಲ್ಲಿ ಕೊರೊನಾ ವೈರಸ್ ಪರೀಕ್ಷೆ ಕೇಂದ್ರ ತೆರೆಯುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ ಇಲ್ಲದೆ ಇರೋದ್ರಿಂದ ರಕ್ತದ ಮಾದರಿಯನ್ನು ಬೆಂಗಳೂರಿಗೆ ಕಳುಹಿಸಿ ಕೊಡಲಾಗ್ತಿದೆ. ಇದರಿಂದ ಬಹಳಷ್ಟು ಸಮಸ್ಯೆ ಆಗ್ತಿದೆ. ಹೀಗಾಗಿ ಜಿಲ್ಲೆಯಲ್ಲೇ ಒಂದು ಪರೀಕ್ಷಾ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಲಬುರಗಿ ಮೂಲದ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇವರು ಶಂಕಿತ ಕೊರೊನಾ ಪೀಡಿತರಾಗಿದ್ದರು ಎಂದು ಹೇಳಲಾಗುತ್ತಿದೆ. ಈ ವ್ಯಕ್ತಿ ಸೌದಿ ಅರೇಬಿಯಾದಿಂದ ವಾಪಸಾಗಿದ್ದರು. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಹೈದ್ರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇದೀಗ ಈ ಸಾವನ್ನು ಪ್ರಮುಖವಾಗಿರಿಸಿಕೊಂಡು ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.