ETV Bharat / state

ಭ್ರಷ್ಟಾಚಾರದ ಬಗ್ಗೆ ದೂರು : 10 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ - ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರದ ಆರೋಪ

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಕೆಲಸಗಳನ್ನು ಮಾಡಿಕೊಡಲು ಹಣವನ್ನು ಕೇಳಲಾಗುತ್ತಿದೆ. ಸೇರಿದಂತೆ ಅನೇಕ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.​ ಪಾಟೀಲ್​ ನೇತೃತ್ವದ ಪೊಲೀಸ್ ತಂಡ ಸಬ್​​ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
author img

By

Published : Jun 28, 2022, 6:53 PM IST

ಬೆಂಗಳೂರು: ಸಬ್​​ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದಿತ್ತು. ಈ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ‌ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.​ ಪಾಟೀಲ್​ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ‌.

ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇಸಿ ಸರ್ಟಿಫಿಕೇಟ್ ವಿಳಂಬ, ಅಕ್ರಮವಾಗಿ ಜಮೀನು ಪರಭಾರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ, ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಸೇರಿದಂತೆ ನಾನಾ ರೀತಿಯ ದೂರುಗಳ ಸರಮಾಲೆ ಲೋಕಾಯುಕ್ತಕ್ಕೆ ಬಂದಿತ್ತು‌.‌ ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಅಧಿಕಾರಿಗಳು, ಮಂಗಳವಾರ 10 ಕಡೆಗಳಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ಬಳಿಕ ಆಂತರಿಕ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ: 'ಎಐಸಿಸಿ ಅಧ್ಯಕ್ಷ ಸ್ಥಾನದ ಕಗ್ಗಂಟು ಬಗೆಹರಿಸದವರು ಸಿದ್ದು-ಡಿಕೆಶಿ ನಡುವಿನ ಸಿಎಂ ಗಾದಿ ಕಾದಾಟ ಪರಿಹರಿಸ್ತಾರಾ?'

ಎಲ್ಲೆಲ್ಲಿ ದಾಳಿ?: ಯಶವಂತಪುರ, ಕೆ.ಆರ್.ಪುರ,‌ ಜಯನಗರ ನಾಗರಭಾವಿ, ಬೊಮ್ಮನಹಳ್ಳಿ, ಗಂಗಾನಗರ, ಬ್ಯಾಟರಾಯನಪುರ, ಮಾದನಾಯಕನಹಳ್ಳಿ, ಆರ್.ಆರ್.ನಗರ, ಅತ್ತಿಬೆಲೆ ಹಾಗೂ ಜಿಗಣಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಕೆ.ವಿ. ಅಶೋಕ್ ನೇತೃತ್ವದಲ್ಲಿ 10 ಮಂದಿ ಡಿಎಸ್ಪಿ, 20 ಮಂದಿ ಇನ್ ಸ್ಪೆಕ್ಟರ್ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.