ETV Bharat / state

ಬೆಂಗಳೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ; ತನಿಖೆಗೆ ಆಗ್ರಹಿಸಿದ ದಲಿತ ಸಂಘರ್ಷ ಸಮಿತಿ - ಮಾವಳ್ಳಿ ಶಂಕರ್

ಬೆಂಗಳೂರು ನಗರ‌ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್ ವಿರುದ್ಧ ಆರೋಪ ಕೇಳಿ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ
ಸಮಾಜ ಕಲ್ಯಾಣ ಇಲಾಖೆ
author img

By

Published : May 29, 2023, 7:53 PM IST

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಅನುದಾನ ದುರ್ಬಳಕೆ ಮಾಡಿಕೊಂಡು ಭಾರಿ ಭ್ರಷ್ಟಾಚಾರ ಎಸಗಿರುವ ಆರೋಪ ಬೆಂಗಳೂರು ನಗರ‌ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್ ವಿರುದ್ಧ ಕೇಳಿ ಬಂದಿದೆ. ಇಲಾಖೆಯ ಅನುದಾನವನ್ನು ಸೂಕ್ತವಾಗಿ ಬಳಸಿಕೊಳ್ಳದೇ ಶಿವಕುಮಾರ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ಇಂದು ಸಂಪಂಗಿ ರಾಮನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಎದುರು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಭ್ರಷ್ಟಾಚಾರದಲ್ಲಿ ತೊಡಗಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್ ವಿರುದ್ದ ಗಭೀರವಾಗಿ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು.

ಇದನ್ನೂ ಓದಿ : ಗ್ಯಾರಂಟಿ ಜಾರಿ ಸಂಬಂಧ ಸಿಎಂ ಮಹತ್ವದ ಸಭೆ: ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 12,038 ಕೋಟಿ ಹೊರೆ?

ಪ್ರತಿಭಟನೆ ಬಳಿಕ ಮಾತನಾಡಿದ ಮಾವಳ್ಳಿ ಶಂಕರ್ ಅವರು, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್​ಗಳನ್ನು ನಂಬಿ ರಾಜ್ಯದ ಮೂಲೆ ಮೂಲೆಯಿಂದ ಶಿಕ್ಷಣ ಪಡೆಯಲು ಬಡ ವಿದ್ಯಾರ್ಥಿಗಳು ಬೆಂಗಳೂರಿಗೆ ಬರುತ್ತಾರೆ. ಉದ್ಯೋಗ ಅರಸಿ ಮಹಿಳೆಯರು ಬಂದು ನೆಲೆಸುತ್ತಾರೆ. ಆದರೆ, ಇಲಾಖೆಯ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಶಿವಕುಮಾರ್, ಕಾಮಗಾರಿಯಿಂದ ಹಿಡಿದು ಹಾಸ್ಟೆಲ್ ಊಟದಲ್ಲಿಯೂ ಅಕ್ರಮ ಎಸಗುತ್ತಿದ್ದಾರೆ. ಈ ಕುರಿತು ಹಾಸ್ಟೆಲ್​ ವಿದ್ಯಾರ್ಥಿಗಳಿಂದ ಮಾಹಿತಿಯನ್ನು ಕಲೆಹಾಕಿಯೇ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.

ಇಂದಿಗೂ ಸಮಾಜ ಕಲ್ಯಾಣ ಹಾಸ್ಟೆಲ್​ಗಳಲ್ಲಿ‌ ಇರುವ ವಿದ್ಯಾರ್ಥಿಗಳಿಗೆ ಕಳಪೆ ಊಟ ಕೊಡಲಾಗುತ್ತಿದೆ. ಕನಿಷ್ಠ ಕೈದಿಗಳಿಗೆ ಸಿಗುವ ವ್ಯವಸ್ಥೆಯೂ ಹಾಸ್ಟೆಲ್ ವಿಧ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಜೊತೆಗೆ ತಮ್ಮ ಆತ್ಮೀಯರಿಗೆ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಾತಿ ನೀಡುವುದು. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯಕ್ಕಿಂತ ಅತಿಯಾಗಿ ವಿದ್ಯಾರ್ಥಿ ವೇತನ ಹೆಚ್ಚಿಸುವುದನ್ನು ಶಿವಕುಮಾರ್ ಮಾಡುತ್ತಿದ್ದಾರೆ.

ಇದನ್ನೂ ಓದಿ : ಪಂಚಾಯ್ತಿ ಮಟ್ಟದಲ್ಲಿ ನವೋದಯ ಶಾಲೆ ಆರಂಭಿಸುವ ಪ್ರಸ್ತಾಪ: ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದ ಡಿಕೆಶಿ

ಅಲ್ಲದೇ ಹಾಸ್ಟೆಲ್ ಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳನ್ನು ತೆರೆಯದಿರುವುದು ಅನೇಕ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಹಾಗಾಗಿ ಶಿವಕುಮಾರ್ ವಿರುದ್ಧ ತನಿಖೆಗೆ ದಲಿತ ಸಂಘರ್ಷ ಸಮಿತಿಯು ಮೇಲಧಿಕಾರಿಗಳಿಗೆ ಮನವಿ ಮಾಡಿದ್ದು, ಅವರ ಅವಧಿಯ ಎಲ್ಲ ಪ್ರಕ್ರಿಯೆಗಳನ್ನು ತನಿಖೆ ನಡೆಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ಮಾಡಲಾಗಿದೆ ಎಂದು ಮಾವಳ್ಳಿ ಶಂಕರ್ ಹೇಳಿದರು.

ಇದನ್ನೂ ಓದಿ : ಕಾಮಗಾರಿಗಳ ಫೋಟೋ, ವಿಡಿಯೋ, ದಾಖಲೆಗಳ ಸಮೇತ ಸರ್ಕಾರಕ್ಕೆ ವರದಿ ಸಲ್ಲಿಸಿ: ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.