ETV Bharat / state

ಭ್ರಷ್ಟಾಚಾರ ಕಡಿಮೆ ಅಪಾಯದ ಹೆಚ್ಚು ಲಾಭದ ವ್ಯಾಪಾರ : ಹೈಕೋರ್ಟ್ - ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ಸಹಾಯ ಪಡೆಯುತ್ತಿರುವ ಸಂಸ್ಥೆಯ ಉದ್ಯೋಗಿಯು ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರೆ, ಆತನನ್ನು ಸರ್ಕಾರಿ ನೌಕರ ಎಂದು ಪರಿಗಣಿಸಬಹುದು. ಇಂತಹ ಉದ್ಯೋಗಿ ಸರ್ಕಾರ ಮತ್ತು ಸಾರ್ವಜನಿಕರಿಗೆ ಉತ್ತರದಾಯಿಯಾಗಿರುತ್ತಾನೆ..

high-court
ಹೈಕೋರ್ಟ್
author img

By

Published : Jul 21, 2021, 10:29 PM IST

ಬೆಂಗಳೂರು : ಭ್ರಷ್ಟಾಚಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಭ್ರಷ್ಟಾಚಾರ ಎಂಬುದು ಕಡಿಮೆ ಅಪಾಯದ ಹೆಚ್ಚು ಲಾಭದ ವ್ಯಾಪಾರವಾಗಿ ರೂಪುಗೊಂಡಿದೆ. ಹೀಗಾಗಿ, ಭ್ರಷ್ಟಾಚಾರವನ್ನು ನಿಯಂತ್ರಿಸಲು ಕಾನೂನುಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ.

ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿ ಭ್ರಷ್ಟಚಾರ ರೂಪುಗೊಂಡಿದೆ. ನೆಲೆದ ಕಾನೂನು, ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುತ್ತಿದೆ. ಭ್ರಷ್ಟ ವ್ಯಕ್ತಿಗಳು ಕಾನೂನು ವ್ಯವಸ್ಥೆಯ ಲೋಪಗಳ ಪ್ರಯೋಜನ ಪಡೆದುಕೊಳ್ಳುತ್ತಾರೆ. ಈ ಕಾರಣಕ್ಕಾಗಿಯೇ ಭ್ರಷ್ಟಆಚಾರ ಕಡಿಮೆ ಅಪಾಯದ ಹೆಚ್ಚು ಲಾಭದ ವ್ಯಾಪಾರವಾಗಿದೆ.

ಭ್ರಷ್ಟಾಚಾರ ಜನರಲ್ಲಿ ವ್ಯವಸ್ಥೆಯ ಮೇಲಿರುವ ನಂಬಿಕೆಯನ್ನು ಅಳಿಸಿ ಹಾಕುತ್ತದೆ. ದೇಶವನ್ನು ಭ್ರಷ್ಟಚಾರದಿಂದ ಮುಕ್ತಗೊಳಿಸಲು ಉತ್ತಮ ಕಾನೂನುಗಳಷ್ಟೇ ಸಾಕಾಗುವುದಿಲ್ಲ. ಆ ಕಾನೂನುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಲಂಚಕ್ಕೆ ಬೇಡಿಕೆ ಇಡುವುದಷ್ಟೇ ಅಲ್ಲ, ಲಂಚ ಕೊಡುವುದೂ ಅಪರಾಧ ಎಂದು ಹೈಕೋರ್ಟ್ ವ್ಯವಸ್ಥೆ ಲೋಪಗಳನ್ನು ಗಂಭೀರವಾಗಿ ಟೀಕಿಸಿದೆ.

ಇದೇ ವೇಳೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅನುದಾನ ಪಡೆಯುತ್ತಾ ಸರ್ಕಾರಿ ಕೆಲಸ ಹಾಗೂ ನಾಗರಿಕ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ನೌಕರನೂ ಸರ್ಕಾರಿ ಉದ್ಯೋಗಿಯಾಗಿಯೇ ಪರಿಗಣಿಸಲ್ಪಡುತ್ತಾನೆ. ಆದ್ದರಿಂದ ಆತನನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ (ಪಿಸಿ ಆ್ಯಕ್ಟ್) ಅಡಿ ಅಪರಾಧ ಕೃತ್ಯಗಳ ಸಂಬಂಧ ಅಭಿಯೋಜನೆಗೆ ಒಳಪಡಿಸಲು ಅವಕಾಶವಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು 2021ರ ಮಾರ್ಚ್​ 8ರಂದು ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಡಿ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ. ಕೃಷ್ಣೇಗೌಡ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ಹಾಗೂ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೃಷ್ಣೇಗೌಡ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ್ದ ವಕೀಲರು ಹೈಕೋರ್ಟ್ ಈ ಹಿಂದೆ ಗೋಪಿನಾಥ್ ವರ್ಸಸ್ ಬಿಜಾಪುರದ ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ‘ನಿರ್ಮಿತಿ ಕೇಂದ್ರದ ಉದ್ಯೋಗಿಯನ್ನು ಸರ್ಕಾರಿ ನೌಕರ ಎಂದು ಪರಿಗಣಿಸಲು ಅವಕಾಶವಿಲ್ಲ ಎಂದು ಆದೇಶಿಸಿದೆ. ಅಲ್ಲದೇ, ಲೋಕಾಯುಕ್ತ ಪೊಲೀಸರು ಪಿಸಿ ಕಾಯ್ದೆ ಅಡಿ ದಾಖಲಿಸಿದ್ದ ಎಫ್ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಿದೆ.

ಈ ಆದೇಶವನ್ನು ಸುಪ್ರೀಂಕೊರ್ಟ್ ಸಹ ಎತ್ತಿ ಹಿಡಿದಿದೆ. ಇನ್ನು, ನಿರ್ಮಿತಿ ಕೇಂದ್ರದ ಆಡಳಿತ ಮಂಡಳಿ ತನ್ನ ನೌಕರರನ್ನು ನೇಮಿಸುತ್ತದೆ. ಹೀಗಾಗಿ, ಅವರು ಆ ಕೇಂದ್ರದ ಉದ್ಯೋಗಿಗಳೇ ಹೊರತು ಸರ್ಕಾರಿ ಉದ್ಯೋಗಿಗಳಲ್ಲ. ಆದ್ದರಿಂದ ಅರ್ಜಿದಾರನ ವಿರುದ್ಧ ಪಿಸಿ ಆ್ಯಕ್ಟ್ ಅಡಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿದ್ದರು.

ಅರ್ಜಿದಾರನ ಪರ ವಕೀಲರ ವಾದ ತಿರಸ್ಕರಿಸಿರುವ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ, ನಿರ್ಮಿತಿ ಕೇಂದ್ರ ರಾಜ್ಯ ಸರ್ಕಾರದ ಕೆಲಸ ನಿರ್ವಹಿಸುತ್ತಿದೆ. ಹೀಗಾಗಿ, ನಿರ್ಮಿತಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ ಎಂದು ಪರಿಗಣಿಸಬಹುದು. ಅರ್ಜಿದಾರ ಕೇಂದ್ರದ ಯೋಜನಾ ವ್ಯವಸ್ಥಾಪಕರಾಗಿ ಸಾರ್ವಜನಿಕ ಕೆಲಸ ನಿರ್ವಹಿಸುತ್ತಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರ್ಥಿಕ ಸಹಾಯ ಪಡೆಯುತ್ತಿರುವ ಸಂಸ್ಥೆಯ ಉದ್ಯೋಗಿಯು ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರೆ, ಆತನನ್ನು ಸರ್ಕಾರಿ ನೌಕರ ಎಂದು ಪರಿಗಣಿಸಬಹುದು. ಇಂತಹ ಉದ್ಯೋಗಿ ಸರ್ಕಾರ ಮತ್ತು ಸಾರ್ವಜನಿಕರಿಗೆ ಉತ್ತರದಾಯಿಯಾಗಿರುತ್ತಾನೆ. ಅಂತೆಯೇ, ಕೆಲಸದ ಸ್ವರೂಪ ಕಾಯ್ದೆಯ ‘ಸಾರ್ವಜನಿಕ ಕರ್ತವ್ಯ’ ಪದದ ವ್ಯಾಖ್ಯಾನಕ್ಕೆ ಒಳಡುತ್ತದೆ. ಆದ್ದರಿಂದ ಅರ್ಜಿದಾರನ ವಿರುದ್ಧ ಪಿಸಿ ಆ್ಯಕ್ಟ್ ಅಡಿ ಅಪರಾಧ ಪ್ರಕರಣಗಳಲ್ಲಿ ಅಭಿಯೋಜನೆಗೆ ಗುರಿಪಡಿಸಬಹುದು ತಿಳಿಸಿ ಅರ್ಜಿ ವಜಾಗೊಳಿಸಿದೆ.

ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.