ETV Bharat / state

ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪ: ನೋಡಲ್ ಅಧಿಕಾರಿಯಾಗಿ ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ನೇಮಕ

author img

By

Published : Aug 23, 2021, 8:31 PM IST

ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಅವರಿದ್ದ ಪೀಠ ವಿಚಾರಣೆ ನಡೆಸಿತು.

High Court
ಹೈಕೋರ್ಟ್

ಬೆಂಗಳೂರು: ಸರ್ಕಾರಿ ನೌಕರರ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣಾ ವರದಿ ಆಧರಿಸಿ ಸರ್ಕಾರ ಕೈಗೊಂಡ ಕ್ರಮಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನು(ವಿಚಕ್ಷಣಾ) ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​​​​ಗೆ ಮಾಹಿತಿ ನೀಡಿದೆ.

ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಶಿಸ್ತು ಕ್ರಮ ಜರುಗಿಸಲು ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು ಸಲ್ಲಿಸಿರುವ ಶಿಫಾರಸು ವರದಿಗಳ ಅನ್ವಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಈ ವೇಳೆ, ಸರ್ಕಾರದ ಪರ ವಕೀಲರು ಪೀಠಕ್ಕೆ ನೋಡೆಲ್ ಅಧಿಕಾರಿಯಾಗಿ ನೇಮಕಗೊಂಡಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಜಂಟಿ ಕಾರ್ಯದರ್ಶಿ (ವಿಚಕ್ಷಣಾ) ಎಲ್. ಶಾರದಾ ಸಲ್ಲಿಸಿರುವ ಪ್ರಮಾಣ ಪತ್ರ ನೀಡಿದರು. ವರದಿ ದಾಖಲಿಸಿಕೊಂಡ ಪೀಠ ವಿಚಾರಣೆಯನ್ನು ಸೆ. 9ಕ್ಕೆ ಮುಂದೂಡಿತು.

ಪ್ರಮಾಣ ಪತ್ರದಲ್ಲಿ ಏನಿದೆ :

ದುರ್ನಡತೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಸರ್ಕಾರಿ ನೌಕರರ ವಿರುದ್ಧ ವಿಚಾರಣೆ ನಡೆಸಿ ಕ್ರಮ ಜರುಗಿಸಲು ಶಿಫಾರಸು ಮಾಡಿ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು ಸಲ್ಲಿಸಿದ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರ ಕೈಗೊಂಡ ಕ್ರಮಗಳ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮತ್ತು ಈ ವಿಚಾರದಲ್ಲಿ ಸಮನ್ವಯತೆ ಸಾಧಿಸಲು ಡಿಪಿಎಆರ್ ಜಂಟಿ (ವಿಚಕ್ಷಣ) ಕಾರ್ಯದರ್ಶಿಯನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಿದೆ. ಈ ಕುರಿತು 2021ರ ಆ.6ರಂದು ಆದೇಶ ಹೊರಡಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ಅಲ್ಲದೇ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರ ಶಿಫಾರಸು ವರದಿ ಆಧರಿಸಿ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಮತ್ತು ಸಕ್ಷಮ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಕ್ಷಣಾ ವಿಭಾಗವು ಪತ್ರ ಬರೆದಿದೆ. ಈವರೆಗೆ 24 ಇಲಾಖೆಗಳ ಪೈಕಿ 14 ಇಲಾಖೆಗಳಿಂದ ವರದಿ ಬಂದಿದೆ. 10 ಇಲಾಖೆಗಳಿಂದ ವರದಿ ಬರಬೇಕಿದೆ ಎಂದು ಪ್ರಮಾಣ ಪತ್ರದಲ್ಲಿ ಸರ್ಕಾರ ತಿಳಿಸಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.