ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ಗಂಟೆಗಳಿಂದ ಸಿಸಿಬಿ ಪೊಲೀಸರು ಕಾಸ್ಟ್ಯುಮ್ ಡಿಸೈನರ್ ರಮೇಶ್ ದಂಬೆಲ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ರಮೇಶ್ಗೆ ಬಾಲಿವುಡ್ ಸ್ಟಾರ್ ನಟರೊಂದಿಗೆ ಲಿಂಕ್ ಇರುವುದು ಸಿಸಿಬಿ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಮೃತಪಟ್ಟಿರುವ ನಟ ಸುಶಾಂತ್ ಸಿಂಗ್ ರಜಪೂತ್ ಜೊತೆಗೂ ರಮೇಶ್ ಲಿಂಕ್ ಇದ್ದು, ಈತ ಸುಶಾಂತ್ ಜೊತೆ ಪಾರ್ಟಿಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ರಮೇಶ್ ವಿಚಾರಣೆ ನಡೆಸುತ್ತಿದ್ದಾರೆ.