ETV Bharat / state

ಹುಬ್ಬಳ್ಳಿ ಗಲಭೆ ರಿಂಗ್ ಮಾಸ್ಟರ್ ಮಹಾನಾಯಕ ಆಗಿರಬಹುದೇ? ಮೀರ್‌ಸಾದಿಕ್ ಆಗಿರಬಹುದೇ?: ಬಿಜೆಪಿ

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ? ಆ ರಿಂಗ್ ಮಾಸ್ಟರ್ ಮಹಾನಾಯಕ ಆಗಿರಬಹುದೇ ಅಥವಾ ಮೀರ್‌ಸಾದಿಕ್ ಆಗಿರಬಹುದೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

BJP speak against Congress
ಬಿಜೆಪಿ
author img

By

Published : Apr 22, 2022, 3:20 PM IST

ಬೆಂಗಳೂರು: ಹುಬ್ಬಳ್ಳಿ ಗಲಭೆ ವಿಚಾರವಾಗಿ ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಟ್ವೀಟ್‌ ಮೂಲಕ ತರಾಟೆಗೆ ತೆಗೆದುಕೊಂಡಿದೆ. ಜಿಹಾದ್ ಬೆಂಬಲಿಸೋ ಕಾಂಗ್ರೆಸ್ ಎಂದು ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದೆ. ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ. ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನವಾಗಿದೆ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ, ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ, ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನ ಎನ್ನುವ ಅಂಕಿಅಂಶ ಉಲ್ಲೇಖಿಸಿ ಕಾಂಗ್ರೆಸ್ ಸಪೋರ್ಟ್ಸ್ ಜಿಹಾದ್ ಹ್ಯಾಷ್ ಟ್ಯಾಗ್​​ನೊಂದಿಗೆ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಹಿಜಾಬ್​ ಹೈಡ್ರಾಮಾ: ವಿದ್ಯಾರ್ಥಿನಿಯರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಉಡುಪಿ ಶಾಸಕ

ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂತ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ. ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ? ಆ ರಿಂಗ್ ಮಾಸ್ಟರ್ ಮಹಾನಾಯಕ ಆಗಿರಬಹುದೇ ಅಥವಾ ಮೀರ್‌ಸಾದಿಕ್ ಆಗಿರಬಹುದೇ? ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರನ್ನು ಬಿಜೆಪಿ ಕುಟುಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.