ETV Bharat / state

ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ: ಒಂದು ನಿಮಿಷ ಮೌನಾಚರಣೆ - ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪ

ವಿಧಾನ ಪರಿಷತ್​​ನಲ್ಲಿ ಇಂದು ಬಜೆಟ್​​ ಅಧಿವೇಶನದ ಮೊದಲ ದಿನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು.

COUNCIL_CONDOLENCE   in budget first day session
ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ
author img

By

Published : Mar 2, 2020, 12:32 PM IST

ಬೆಂಗಳೂರು: ಮಾಜಿ ಸಚಿವ ಸಿ. ಚನ್ನಿಗಪ್ಪ ಸೇರಿದಂತೆ ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ ಸೂಚಿಸಲಾಯಿತು.

ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸಂತಾಪ ಸೂಚನೆ ಮಂಡಿಸಿದರು. ಮಾಜಿ ಸಚಿವ ಸಿ.ಚನ್ನಿಗಪ್ಪ ಶಾಸಕರಾಗಿ ಸಚಿವರಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಸಂತಾಪ‌ ಸೂಚಿಸಲಾಯಿತು, ನಂತರ ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಎಸ್ ಭಾಗವತ್ ನಿಧ‌ಕ್ಕೆ ಸಂತಾಪ‌ ಸೂಚಿಸಲಾಯಿತು. ಸಹಕಾರಿ ಕ್ಷೇತ್ರದಲ್ಲಿ‌ ಸಲ್ಲಿಸಿದ ಸೇವೆಯನ್ನು ಸ್ಮರಿಸಲಾಯಿತು. ಬಳಿಕ ಇತಿಹಾಸ ತಜ್ಞ ಪ್ರೊ. ಶೆಟ್ಟರ್ ನಿಧನಕ್ಕೆ ಸಂತಾಪ‌ ಸೂಚಿಸಿ ಕನ್ನಡಕ್ಕೆ ಸಲ್ಲಿಸಿರುವ ಸೇವೆ, ಸಂಶೋಧನೆಗಳನ್ನು ಸ್ಮರಿಸಲಾಯಿತು.

ಸಭಾಪತಿಗಳು ಮಂಡಿಸಿದ ಸಂತಾಪ ಸೂಚನೆಗೆ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸಂತಾಪ ಸೂಚನೆಗೆ ಸಹಮತ ವ್ಯಕ್ತಪಡಿಸಿದರು. ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಇನ್ನು ಹಲವು ನಾಯಕರು ಸಂತಾಪ ಸೂಚಿಸಿದ್ರು. ನಂತರ ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಅಗಲಿದ ಗಣ್ಯರಿಗೆ ಸದನ ಗೌರವ ಸಲ್ಲಿಕೆ ಮಾಡಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.