ETV Bharat / state

ವಿಧಾನಪರಿಷತ್ ಚುನಾವಣೆ : ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ - ವಿಧಾನಪರಿಷತ್ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ..

council-election-seven-candidates-elected-unanimously
ವಿಧಾನಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ
author img

By

Published : May 27, 2022, 5:02 PM IST

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ. ಏಳು ಸ್ಥಾನಗಳಿಗ ಜೂನ್ 3ರಂದು ನಡೆಯಬೇಕಾಗಿದ್ದ ಚುನಾವಣೆಗೆ ಬಿಜೆಪಿಯಿಂದ ನಾಲ್ಕು, ಕಾಂಗ್ರೆಸ್​​ನಿಂದ ಇಬ್ಬರು ಹಾಗೂ ಜೆಡಿಎಸ್​ನಿಂದ ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಬಿಜೆಪಿಯಿಂದ ಲಕ್ಷ್ಮಣ ಸವದಿ, ಕೇಶವ ಪ್ರಸಾದ್, ಹೇಮಲತಾ ನಾಯಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್​​ನಿಂದ ಅಬ್ದುಲ್ ಜಬ್ಬಾರ್, ಎಂ. ನಾಗರಾಜ್ ಯಾದವ್ ಮತ್ತು ಜೆಡಿಎಸ್​ನಿಂದ ಟಿ.ಎ ಶರವಣ ಅವಿರೋಧ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜೈರಾಂ ರಮೇಶ್ ಹೆಸರು ಅಂತಿಮ: 30ಕ್ಕೆ ನಾಮಪತ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.