ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳು ಕಣದಲ್ಲಿರುವ ಕ್ಷೇತ್ರಗಳಲ್ಲಿ ಅಧಿಕಾರದ ದುರುಪಯೋಗ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಸ್ಸೋಂನ ರತಬಾಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿಯ ಪತ್ನಿಯ ಕಾರಿನಲ್ಲಿ ಮತಯಂತ್ರ ಪತ್ತೆಯಾಗಿದೆ. ದೇಶದಲ್ಲಿ ಎಲ್ಲೇ ಚುನಾವಣೆ ನಡೆದಾಗಲೂ ಖಾಸಗಿ ವಾಹನದಲ್ಲಿ ಮತಯಂತ್ರಗಳು ಸಿಗುತ್ತವೆ. ಎಲ್ಲದಕ್ಕಿಂತ ಹೆಚ್ಚಾಗಿ ಬಿಜೆಪಿ ಅಭ್ಯರ್ಥಿ ಅಥವಾ ಅವರ ಸಹವರ್ತಿಗಳ ಬಳಿ ಮತಯಂತ್ರಗಳು ಸಿಗುತ್ತವೆ ಎಂದರು.
ಓದಿ : ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ ಹೀಗೆ ಮಾತನಾಡುತ್ತಿದ್ದಾರೆ: ಸಚಿವ ಸೋಮಶೇಖರ್
ಅಧಿಕಾರಕ್ಕಾಗಿ ಬಿಜೆಪಿ ಎಂತಹ ನೀಚ ಕೃತ್ಯಕ್ಕೆ ಬೇಕಾದರೂ ಇಳಿಯುತ್ತದೆ. ಸರ್ಕಾರಿ ಸ್ವಾಮ್ಯದ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿಯುತ್ತಿದೆ. ಚುನಾವಣಾ ಅಕ್ರಮಗಳು ನಡೆಯುತ್ತಿದ್ದರೂ, ಚುನಾವಣಾ ಆಯೋಗ ಮಾತ್ರ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗುತ್ತಿದೆ ಎಂದು ಹೇಳಿದರು.