ETV Bharat / state

ಕೈಗಾರಿಕಾ ಉದ್ದೇಶಕ್ಕಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನ: ಸಚಿವ ನಿರಾಣಿ - ಈಟಿವಿ ಭಾರತ ಕನ್ನಡ

ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ 10 ವರ್ಷಗಳೊಳಗಾಗಿ ಕೈಗಾರಿಕೆಗಳು ಸ್ಥಾಪಿನೆ ಮಾಡಬೇಕು. ಇಲ್ಲವಾದಲ್ಲಿ ಭೂಮಿ ಹಿಂಪಡೆಯಲಾಗುವುದು ಎಂದು ನಿರಾಣಿ ಹೇಳಿದ್ದಾರೆ.

KN_BNG_
ಮುರುಗೇಶ್​ ನಿರಾಣಿ
author img

By

Published : Sep 24, 2022, 9:33 AM IST

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೆ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಿರಾಣಿ ಹೇಳಿದರು.

ಯೋಜನೆಯ ಅಂದಾಜು ಗಾತ್ರ ಆಧರಿಸಿ ಉದ್ಯಮ ಆರಂಭಿಸಲು ಕಾಲಮಿತಿ ನಿಗದಿ ಪಡಿಸಲಾಗುತ್ತದೆ. ಉಕ್ಕು ಉದ್ಯಮಗಳಿಗೆ ಐದು ವರ್ಷಗಳವರೆಗೂ ಸಮಯ ಬೇಕಾಗುತ್ತದೆ. ಒಟ್ಟಾರೆ ಉದ್ಯಮ ಆರಂಭಕ್ಕೆ ಗರಿಷ್ಠ 10 ವರ್ಷಗಳ ಕಾಲಾವಕಾಶ ನೀಡಲಾಗುತ್ತದೆ. ಅದರ ಒಳಗಾಗಿ ಉದ್ಯಮ ಆರಂಭವಾಗದಿದ್ದರೆ ನೋಟಿಸ್ ನೀಡಿ ಭೂಮಿ ಹಿಂಪಡೆಯುವ ಪ್ರಕ್ರಿಯೆ ನಡೆಸಲಾಗುವುದು. ಈವರೆಗೂ 117 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಇನ್ಮುಂದೆ ಕೆವಿಯಟ್ ಹಾಕಿ ಭೂಮಿ ಹಿಂಪಡೆಯಲು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಚಿವ ನಿರಾಣಿ ಉತ್ತರಿಸಿದರು.

ಕೈಗಾರಿಕೆಗಳು ಸ್ಥಾಪಿನೆ ಕುರಿತ ಪ್ರಶ್ನೆಗೆ ನಿರಾಣಿ ಉತ್ತರ

ನವೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ನಮ್ಮ ರಾಜ್ಯ ಸತತ ನಾಲ್ಕನೇ ತ್ರೈಮಾಸಿಕದಲ್ಲೂ ಮೊದಲ ಸ್ಥಾನದಲ್ಲಿದೆ. ದೇಶದ ಹೂಡಿಕೆಯಲ್ಲಿ ಶೇ.38ರಷ್ಟು ಪಾಲನ್ನು ನಾವು ಹೊಂದಿದ್ದೇವೆ ಎಂದು ನಿರಾಣಿ ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ, ಜಾರಕಿಹೊಳಿ ಕಲಾಪಕ್ಕೆ ಗೈರು: ಸೂಚನೆ ನೀಡದೆ ಗೈರಾಗಿದ್ದಕ್ಕೆ ಸ್ಪೀಕರ್ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.