ETV Bharat / state

ಜನಧ್ವನಿ ಜಾಗೃತಿ ಜಾಥಾ ಚಾಲನೆಗೆ ಕ್ಷಣಗಣನೆ: ಕೆಪಿಸಿಸಿ ಕಚೇರಿಯತ್ತ ಆಗಮಿಸುತ್ತಿರುವ ಕೈ ನಾಯಕರು - Janadhwani Jagruthi Jatha

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪರಿಶ್ರಮ ನಡೆಸಿರುವ ಕಾಂಗ್ರೆಸ್ ನಾಯಕರು ಇದಕ್ಕಾಗಿ ವಿವಿಧ ಹಂತಗಳಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಭಾಗವಾಗಿಯೇ ಇಂದು ಜನಧ್ವನಿ ಜಾಥಾ ಹಮ್ಮಿಕೊಳ್ಳಲಾಗಿದೆ.

congress  Janadhwani Jagruthi Jatha
ಜನಧ್ವನಿ ಜಾಗೃತಿ ಜಾಥಾ ಚಾಲನೆಗೆ ಕ್ಷಣಗಣನೆ
author img

By

Published : Mar 3, 2021, 9:09 AM IST

ಬೆಂಗಳೂರು: ತಮ್ಮ ಶಾಸಕರು ಇಲ್ಲದ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಿರುವ ಕಾಂಗ್ರೆಸ್ ಇಂದು ಜನಧ್ವನಿ ಜಾಥಾಗೆ ಚಾಲನೆ ನೀಡಲಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಜನಧ್ವನಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ಜನಧ್ವನಿ ಜಾಗೃತಿ ಜಾಥಾ: ಕೆಪಿಸಿಸಿ ಕಚೇರಿಯತ್ತ ಆಗಮಿಸುತ್ತಿರುವ ಕೈ ನಾಯಕರು

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪರಿಶ್ರಮ ನಡೆಸಿರುವ ಕಾಂಗ್ರೆಸ್ ನಾಯಕರು ಇದಕ್ಕಾಗಿ ವಿವಿಧ ಹಂತಗಳಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಇದರ ಭಾಗವಾಗಿಯೇ ಇಂದು ಜನಧ್ವನಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರಿಗೆ ಸಂಕಷ್ಟ ತಂದೊಡ್ಡುವ ಕಾನೂನುಗಳನ್ನು ಜಾರಿಗೆ ತರುತ್ತಿವೆ. ಬೆಲೆ ಏರಿಕೆ ಸೇರಿದಂತೆ ಹಲವು ರೀತಿಯಲ್ಲಿ ಜನರಿಗೆ ತೊಂದರೆ ನೀಡುವಂತಹ ಆಡಳಿತವನ್ನೇ ನೀಡುತ್ತಿವೆ ಎಂದು ಆರೋಪಿಸಿ ಜನರಿಗೆ ಮಾಹಿತಿ ತಲುಪಿಸಲು ಕಾಂಗ್ರೆಸ್ ಮುಂದಾಗಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಈ ಜಾಥಾ ಆಯೋಜಿಸಿದ್ದು, ಪಕ್ಷದ ಪಾಲಿಗೆ ಅತ್ಯಂತ ಪ್ರತಿಷ್ಠೆಯ ಕಾರ್ಯಕ್ರಮವಾಗಿದೆ. ಪಕ್ಷದ ಎಲ್ಲ ರಾಜ್ಯ ನಾಯಕರು ಇಂದು ಉಪಸ್ಥಿತರಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿ ಮುಂಭಾಗ ಜಾಥಾಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಾಥಾಗೆ ಚಾಲನೆ ಸಿಗಲಿದೆ. ವಿಶೇಷ ವಾಹನದಲ್ಲಿ ಕಾಂಗ್ರೆಸ್ ನಾಯಕರು ದೇವನಹಳ್ಳಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಬೆಳಗ್ಗೆ 11 ಗಂಟೆಗೆ ಮೆರವಣಿಗೆ ಮೂಲಕ ಜನನಿಬಿಡ ಪ್ರದೇಶದಲ್ಲಿ ಸಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ಕುರಿತು ಮನವರಿಕೆ ಮಾಡಲಿದ್ದಾರೆ.

ಬಳಿಕ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ತೆರಳುವ ಕಾಂಗ್ರೆಸ್ ನಾಯಕರು ಅಲ್ಲಿ ಸಹ ಜನಜಾಗೃತಿ ಜಾಥಾ ಕೈಗೊಳ್ಳಲಿದ್ದಾರೆ. ಜನಧ್ವನಿ ಮೂಲಕ ನಿರಂತರವಾಗಿ ಸರ್ಕಾರಗಳ ವಿರುದ್ಧ ಹೋರಾಟ ನಡೆಸಿರುವ ಕಾಂಗ್ರೆಸ್ ಪಕ್ಷ ಈ ಒಂದು ಮಹತ್ವದ ಜಾಥಾ ಮೂಲಕ ರಾಜ್ಯಾದ್ಯಂತ ಹಂತ ಹಂತವಾಗಿ ತೆರಳಲಿದ್ದು, ಮೊದಲ ಹಂತವಾಗಿ ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ರ‍್ಯಾಲಿ ನಡೆಯಲಿದೆ.

ಕೆಪಿಸಿಸಿ ಕಚೇರಿಗೆ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದು, ರ‍್ಯಾಲಿಗೆ ವಿಶೇಷ ಕಳೆ ತರಲು ಡೊಳ್ಳು ಕುಣಿತ ಸೇರಿದಂತೆ ಹಲವು ಜಾನಪದ ಕಲೆಗಳ ಪ್ರದರ್ಶನ ಮಾಡಲಾಗುತ್ತಿದೆ. ಕೆಪಿಸಿಸಿ ಕಚೇರಿಗೆ ವಿಶೇಷ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜನರನ್ನು ತಮ್ಮತ್ತ ಸೆಳೆಯುವ ಜೊತೆಗೆ ಮುಂದಿನ ಅವಧಿಯಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಒಂದು ರ‍್ಯಾಲಿಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿದೆ.

ಓದಿ: ಜನಧ್ವನಿ ಕಾರ್ಯಕ್ರಮಕ್ಕೆ ವಿಘ್ನ ಬಾರದಿರಲೆಂದು ವಿನಾಯಕನ ಪೂಜೆಗೆ ತೆರಳುತ್ತಿದ್ದೇನೆ: ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.