ETV Bharat / state

ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ: ಬಿಎಸ್​ವೈಗೆ ಬಿಗ್​ ರಿಲೀಫ್ - ಸಿಎಂ ವಿರುದ್ಧ ಅರ್ಜಿವ ವಜಾ

ಸಿಎಂ ಬಿಎಸ್​ವೈ ಮತ್ತು ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದ ಅರ್ಜಿ ವಜಾಗೊಂಡಿದೆ.

City Civil Court dismissed petition against CM BSY
ಸಿಎಂ ಬಿಎಸ್​ವೈಗೆ ಬಿಗ್​ ರಿಲೀಫ್
author img

By

Published : Jul 8, 2021, 1:49 PM IST

Updated : Jul 8, 2021, 2:41 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಆಪ್ತರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿ ಆದೇಶಿಸಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅನುಸಾರ ಸರ್ಕಾರಿ ಹುದ್ದೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತನಿಖೆಗ ರಾಜ್ಯಪಾಲರಿಂದ ಪೂರ್ವಾನುಮತಿ ಪಡೆದಿಲ್ಲ ಎಂಬ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

2021ರ ಜೂನ್ 6ರಂದು ಟಿ.ಜೆ.ಅಬ್ರಹಾಂ ಭ್ರಷ್ಟಚಾರ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಆಪ್ತರಾದ ಶಶಿಧರ ಮರಡಿ, ವಿರೂಪಾಕ್ಷಪ್ಪ ಯಮಕನಮರಡಿ, ಸಂಜಯಶ್ರೀ, ಚಂದ್ರಕಾಂತ್ ರಾಮಲಿಂಗಂ, ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ ಪ್ರಕಾಶ್, ಕ್ರೆಸೆಂಟ್ ಹೋಟೆಲ್ ಮಾಲೀಕರಾದ ಕೆ.ರವಿ ವಿರುದ್ಧ ತನಿಖೆ ಮಾಡುವಂತೆ ಕೋರಿ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ (ನಗರದ 82 ನೇ ಸಿಟಿ ಸಿವಿಲ್ ಆ್ಯಂಡ್ ಸೆಷನ್ಸ್ ಕೋರ್ಟ್​) ಖಾಸಗಿ ದೂರು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ವೇಳೆ ತಾವೇ ಖುದ್ದು ವಾದ ಮಂಡಿಸಿದ್ದ ಅಬ್ರಹಾಂ, ಭ್ರಷ್ಟಾಚಾರ ಆರೋಪಕ್ಕೆ ಪೂರಕವಾಗಿ ಕೆಲ ಬ್ಯಾಂಕ್ ದಾಖಲೆಗಳು ಹಾಗೂ ವಾಟ್ಸಪ್​​ ಚಾಟ್​ಗಳನ್ನು ಒಳಗೊಂಡ ದಾಖಲೆಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ಆದೇಶ ಪ್ರಕಟಿಸಿದ ನ್ಯಾಯಾಲಯ ಆರೋಪಿತರ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ದೂರು ಸಲ್ಲಿಸಿದ್ದರಿಂದ ಎಸಿಬಿ ಅರ್ಜಿದಾರರ ಮನವಿ ತಿರಸ್ಕರಿಸಿದೆ. ಹೀಗಾಗಿ ಅರ್ಜಿದಾರರು ಮಾಡಿರುವ ಮನವಿಯಂತೆ ತನಿಖೆಗೆ ನಿರ್ದೇಶಿಸಲಾಗದು ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ:

ಸಿಎಂ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಇತರೆ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಿಎಂ ಕುಟುಂಬದವರು ನಕಲಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಹೀಗಾಗಿ ಇವರ ವಿರುದ್ಧ ತನಿಖೆ ನಡೆಸುವಂತೆ 2020ರ ನವೆಂಬರ್ 19ರಂದು ಎಸಿಬಿಗೆ ಟಿ.ಜೆ. ಅಬ್ರಹಾಂ ದೂರು ನೀಡಿದ್ದರು.

ಆದರೆ ಎಸಿಬಿ ಅಧಿಕಾರಿಗಳು ದೂರಿನ ತನಿಖೆ ಮಾಡದೆ, ಸೂಕ್ತ ವಿವರಣೆಯನ್ನೂ ನೀಡದೆ 2020ರ ಡಿಸೆಂಬರ್ 15 ರಂದು ದೂರನ್ನು ಕೈಬಿಟ್ಟಿದ್ದಾರೆ. ಹೀಗಾಗಿ ಆರೋಪಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 8, 9, 10, 13 ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 383, 384, 415, 418, 420 ಹಾಗೂ 120 ಬಿ ಅಡಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಕ್ತ ತನಿಖಾ ಸಂಸ್ಥೆಗೆ ನಿರ್ದೇಸಿಸಬೇಕು ಎಂದು ದೂರುದಾರರು ಕೋರಿದ್ದರು.

Last Updated : Jul 8, 2021, 2:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.