ಬೆಂಗಳೂರು : ಮಾಧ್ಯಮಗಳಿಗೆ ನಿರ್ಬಂಧ ಕೋರಿ 6 ಸಚಿವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಮೇ 29 ರವರೆಗೆ ವಿಸ್ತರಿಸಿ ವಿಚಾರಣೆಯನ್ನು ಮುಂದೂಡಿದೆ.
ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಎಸ್.ಟಿ ಸೋಮಶೇಖರ್, ಕೆ.ಸುಧಾಕರ್, ನಾರಾಯಣ ಗೌಡ, ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮೆಯೋ ಹಾಲ್ ಸಂಕೀರ್ಣದಲ್ಲಿರುವ 27ನೇ ಸಿಟಿ ಸಿವಿಲ್ ಕೋರ್ಟ್ನಲ್ಲಿ ಇಂದು ನಡೆಯಿತು.
ಪ್ರಕರಣದ ವಿವರಣೆ :
ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಅಶ್ಲೀಲ ಸಿಡಿ ಹೊರಬರುತ್ತಿದ್ದಂತೆ, ಸಚಿವ ಸಂಪುಟದ 6 ಮಂದಿ ಸಚಿವರು ತಮ್ಮ ವಿರುದ್ದ ಯಾವುದೇ ರೀತಿಯ ಪ್ರಮಾಣಿಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
ಇದನ್ನೂ ಓದಿ: ಸಿಡಿ ಪ್ರಕರಣ.. ಮಗಳ ಹೇಳಿಕೆ ರದ್ದು ಕೋರಿ ಸಂತ್ರಸ್ತೆಯ ತಂದೆಯಿಂದ ಹೈಕೋರ್ಟ್ಗೆ ಮೊರೆ
ಅರ್ಜಿಯನ್ನು ಮಾನ್ಯ ಮಾಡಿದ ಸಿಟಿ ಸಿವಿಲ್ ನ್ಯಾಯಾಲಯ ಮಾರ್ಚ್ 30 ರವರೆಗೆ ಮಾನಹಾನಿ ವರದಿ ಪ್ರಸಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಈ ಬಗ್ಗೆ ರಾಜ್ಯದ ಎಲ್ಲಾ ಮಾಧ್ಯಮಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಅಲ್ಲದೆ ಅರ್ಜಿ ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಿಕೆ ಮಾಡಿತ್ತು.