ETV Bharat / state

ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆ ಸ್ಥಳಾಂತರ ಪ್ರಶ್ನಿಸಿ ಪಿಐಎಲ್:ಸರ್ಕಾರಕ್ಕೆ ನೋಟಿಸ್ - chikballapur flower market displacement

ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆ ಸ್ಥಳಾಂತರ ಪ್ರಶ್ನಿಸಿ ಸಲ್ಲಿಸಿದ್ದ ಪಿಎಎಲ್​​ ಸಂಬಂಧ ಹೈಕೋರ್ಟ್(High court)​ ಸರ್ಕಾರಕ್ಕೆ ನೋಟಿಸ್​ ನೀಡಿದೆ.

chikballapur news
ಸರ್ಕಾರಕ್ಕೆ ನೋಟಿಸ್
author img

By

Published : Nov 10, 2021, 9:53 PM IST

ಬೆಂಗಳೂರು:ಚಿಕ್ಕಬಳ್ಳಾಪುರ ನಗರದಲ್ಲಿನ ಹೂವಿನ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್​ನಿಂದ ಖಾಸಗಿ ಪ್ರದೇಶಕ್ಕೆ ಸ್ಥಳಾಂತರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿದೆ.

ಮಾರುಕಟ್ಟೆ ಸ್ಥಳಾಂತರ ಪ್ರಶ್ನಿಸಿ ಚಂಬಳ್ಳಿ ಗ್ರಾಮದ ಕ್ಯಾತಪ್ಪ ಹಾಗೂ ಇತರೆ ಐವರು ರೈತರು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಇಂದು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ವಾದ ಮಂಡಿಸಿ, ಚಿಕ್ಕಬಳ್ಳಾಪುರ ಎಪಿಎಂಸಿ ಯಾರ್ಡ್‌ನಲ್ಲಿದ್ದ ಹೂವಿನ ಮಾರುಕಟ್ಟೆಯನ್ನು ಕೋವಿಡ್‌ ಕಾರಣ ನೀಡಿ ಕೆ.ವಿ ಕ್ಯಾಂಪಸ್‌ ಬಳಿಯ ಖಾಸಗಿ ಪ್ರದೇಶಕ್ಕೆ ಸ್ಥಳಾಂತರ ಮಾಡಿದ್ದರು. ಈ ತಾತ್ಕಾಲಿಕ ಜಾಗದಲ್ಲಿ ಹೂವುಗಳನ್ನು ಸಂರಕ್ಷಿಸಿಡುವುದಕ್ಕೆ ಸರಿಯಾದ ವ್ಯವಸ್ಥೆ ಇಲ್ಲ. ಮಳೆಗಾಲದಲ್ಲಂತೂ ಹೂವಿನ ಚೀಲಗಳನ್ನು ನೆಲದ ಮೇಲಿಡಲೂ ಸಾಧ್ಯವಾಗುವುದಿಲ್ಲ ಎಂದು ವಿವರಿಸಿದರು.

ಅಲ್ಲದೇ, ಕೋವಿಡ್ ನಿಯಂತ್ರಣಕ್ಕಾಗಿ ಈಗಿರುವ ತಾತ್ಕಾಲಿಕ ಮಾರುಕಟ್ಟೆಯಿಂದಲೇ ಹೂವಿನ ವ್ಯಾಪಾರ ಮುಂದುವರೆಸುವಂತೆ ಎಪಿಎಂಸಿ (APMC) ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ. ಅದು ರೈತರಿಗೆ ಮತ್ತಷ್ಟು ನಷ್ಟ ಉಂಟುಮಾಡುತ್ತದೆ. ರೈತರು ಕೋವಿಡ್ ಮಾರ್ಗಸೂಚಿಗಳ ಅನುಸಾರ ಎಚ್ಚರಿಕೆ ವಹಿಸಿ ವ್ಯಾಪರ ಮಾಡಲು ಸಿದ್ಧವಿದ್ದರೂ ಅಧಿಕಾರಿಗಳು ಸಮ್ಮತಿಸುತ್ತಿಲ್ಲ. ಅಧಿಕಾರಿಗಳ ಈ ನಡೆಯಿಂದ ಹೂ ಬೆಳೆಯುವ ರೈತರಿಗೆ ಸಾಕಷ್ಟು ನಷ್ಟವಾಗುತ್ತಿದೆ. ಆದ್ದರಿಂದ ಹೂವಿನ ಮಾರುಕಟ್ಟೆಯನ್ನು ಮೊದಲಿನಂತೆ ಎಪಿಎಂಸಿ ಮಾರುಕಟ್ಟೆ ಮರು ಸ್ಥಳಾಂತರಿಸಲು ನಿರ್ದೇಶಿಸಬೇಕು ಎಂದು ಕೋರಿದರು.

ವಾದ ಆಲಿಸಿದ ಪೀಠ, ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಹಕಾರ ಹಾಗೂ ಎಪಿಎಂಸಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಎಪಿಎಂಸಿ ನಿರ್ದೇಶಕರು, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಎಪಿಎಂಸಿ ಕಾರ್ಯದರ್ಶಿಗಳಿಗೂ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.