ETV Bharat / state

ಕೊಚಾಡಿಯನ್ ಚಲನಚಿತ್ರ ಪ್ರಕರಣ : ಲತಾ ರಜನಿಕಾಂತ್ ಖುದ್ದು ಹಾಜರಿಗೆ ನ್ಯಾಯಾಲಯ ಸೂಚನೆ - ಹೈಕೋರ್ಟ್

ಕೊಚಾಡಿಯನ್ ಚಲನಚಿತ್ರ ಪ್ರಕರಣ ಸಂಬಂಧ ನಟ ರಜನಿಕಾಂತ್ ಪತ್ನಿ ಲತಾ ಅವರಿಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರು ನ್ಯಾಯಾಲಯ ಸೂಚಿಸಿದೆ.

court-notice-to-lata-rajinikanth-to-appear-for-hearing-in-kochadaiyaan-movie-case
ಕೊಚಾಡಿಯನ್ ಚಲನಚಿತ್ರ ಪ್ರಕರಣ : ಲತಾ ರಜಿನಿಕಾಂತ್ ಖುದ್ದು ಹಾಜರಿಗೆ ನ್ಯಾಯಾಲಯ ಸೂಚನೆ
author img

By ETV Bharat Karnataka Team

Published : Dec 4, 2023, 4:30 PM IST

Updated : Dec 4, 2023, 4:45 PM IST

ಬೆಂಗಳೂರು : ಕೊಚಾಡಿಯನ್ ಚಲನಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ವಿರುದ್ಧದ ಫೋರ್ಜರಿ ಪ್ರಕರಣ ಸಂಬಂಧ 2024ರ ಜನವರಿ 6ರ ಒಳಗಾಗಿ ವಿಚಾರಣೆಗೆ ಹಾಜರಾಗಲು ಬೆಂಗಳೂರು ನ್ಯಾಯಾಲಯ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನಗರದ 1ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ಪ್ರಕರಣವು ಐಪಿಸಿ 463ರ ಅಡಿ (ಫೋರ್ಜಿರಿ) ಆಗಿರುವುದರಿಂದ ಆರೋಪಿತರು ಖುದ್ದು ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ಲತಾ ರಜನಿಕಾಂತ್ ಪರ ವಕೀಲರು, ಆರೋಪಿತರನ್ನು ಖುದ್ದು ಹಾಜರಿಯಿಂದ ವಿನಾಯತಿ ನೀಡಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಆರೋಪ ಜಾಮೀನು ರಹಿತ ಆಗಿರುವುದರಿಂದ ಖುದ್ದು ಹಾಜರಾಗಬೇಕು ಎಂದು ಸೂಚನೆ ನೀಡಿತು.

ಪ್ರಕರಣದ ಹಿನ್ನೆಲೆ: ರಜನಿಕಾಂತ್ ಅವರ ಪುತ್ರಿ ತಮಿಳಿನ ಕೊಚಾಡಿಯನ್ ಸಿನಿಮಾವನ್ನು ನಿರ್ದೇಶಿಸಿದ್ದರು. ಈ ಚಿತ್ರದ ಸಂಬಂಧ ಮೆರ್ಸಸ್ ಅಂಡ್ ಬ್ಯೂರೋ ಅಡ್ವರ್‌ಟೈಸ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಮೆರ್ಸಸ್ ಮೀಡಿಯಾ ಒನ್ ಗ್ಲೋಬಲ್ ಎಂಟರ್‌ಟೈನ್ಮೆಂಟ್ ಲಿಮಿಟೆಡ್ ನಡುವೆ ಆರ್ಥಿಕ ವಹಿವಾಟು ನಡೆದಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಅವರು ಭದ್ರತಾ ಖಾತರಿ ನೀಡಿದ್ದರು. ಆದರೆ, ಚಿತ್ರ ನಷ್ಟಕ್ಕೆ ಗುರಿಯಾಗಿದ್ದರೂ ಮೆರ್ಸಸ್ ಅಂಡ್ ಬ್ಯೂರೋ ಅಡ್ವರ್‌ಟೈಸ್ಮೆಂಟ್ ಪ್ರೈವೇಟ್ ಲಿಮಿಟೆಡ್​​ಗೆ ನಷ್ಟ ಪರಿಹಾರ ತುಂಬಿಕೊಟ್ಟಿರಲಿಲ್ಲ. ಈ ವಿವಾದ ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರಸಾರವಾಗಿತ್ತು. ಈ ಕುರಿತ ಸುದ್ದಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಲತಾ ಅವರು ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯವು 2014ರ ಡಿ. 2ರಂದು ಮಾಧ್ಯಮಗಳಿಗೆ ನಿರ್ಬಂಧಕಾಜ್ಞೆ ನೀಡಿತ್ತು. ಆದರೆ, 2015ರ ಫೆ. 13ರಂದು ವಿಚಾರಣೆಯನ್ನು ವಿಚಾರಣಾ ವ್ಯಾಪ್ತಿಗೆ ಕೋರ್ಟ್‌ಗೆ ವರ್ಗಾಯಿಸಿತ್ತು. ಈ ವೇಳೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದ ಆದೇಶವನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಲತಾ ಅವರ ಅರ್ಜಿಯನ್ನು ಹೈಕೋರ್ಟ್ 2016ರಲ್ಲಿ ವಜಾಗೊಳಿಸಿತ್ತು.

ಈ ಮಧ್ಯೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಆದೇಶ ಪಡೆಯಲು ಬೆಂಗಳೂರು ಪ್ರೆಸ್‌ಕ್ಲಬ್ ಅಧೀನದಲ್ಲಿ ಇರದ ಸಂಸ್ಥೆಯೊಂದರ ನಕಲಿ ದಾಖಲೆಯನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಮೆರ್ಸಸ್ ಅಂಡ್ ಬ್ಯೂರೋ ಅಡ್ವರ್‌ಟೈಸ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು 2015ರ ಮೇ 30ರಂದು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಖಾಸಗಿ ದೂರು ದಾಖಲಿಸಿದ್ದರು. ಜೂ. 9ರಂದು ಲತಾ ಅವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ನಂತರ ತನಿಖೆ ಪೂರ್ಣಗೊಳಿಸಿ ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ 1ನೇ ಎಸಿಎಂಎಂ ನ್ಯಾಯಾಲಯವು ಸುಳ್ಳು ಹಾಗೂ ನಕಲಿ ಸಾಕ್ಷ್ಯ ಬಳಕೆ, ಸುಳ್ಳು ಹೇಳಿಕೆ ನೀಡಿದ, ವಂಚನೆ, ಫೋರ್ಜರಿ ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಂಡು ಲತಾ ಅವರಿಗೆ ಸಮನ್ಸ್ ಜಾರಿ ಮಾಡಿ 2021ರ ಮಾ. 27ರಂದು ಆದೇಶಿಸಿತ್ತು. ಹಾಗಾಗಿ, ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಲತಾ 2021ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಇದೀಗ ಹೈಕೋರ್ಟ್, ಅರ್ಜಿದಾರರ ವಿರುದ್ಧ ಫೋರ್ಜರಿ ಆರೋಪಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿಯಲ್ಲಿ ಸಾಕ್ಷ್ಯಾಧಾರಗಳು ಲಭ್ಯ ಇವೆ. ಆ ಪ್ರಕರಣದ ಕುರಿತ ವಿಚಾರಣೆಯನ್ನು ಅಧೀನ ನ್ಯಾಯಾಲಯ ಮುಂದುವರೆಸಬಹುದು ಎಂದು ಆದೇಶಿಸಿತ್ತು. ಜೊತೆಗೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ವಂಚನೆ, ಸುಳ್ಳು ಹೇಳಿಕೆ ಮತ್ತು ನಕಲಿ ಸಾಕ್ಷ್ಯ ಬಳಕೆ ಆರೋಪಗಳನ್ನು ರದ್ದುಪಡಿಸಿದೆ.

ಆದರೆ, ಫೋರ್ಜರಿ ಪ್ರಕರಣ ವಿಚಾರಣೆ ಮುಂದುವರೆಯುತ್ತಿದ್ದು, ಈ ಪ್ರಕರಣವನ್ನು ರದ್ದುಪಡಿಸಬೇಕು ಎಂದು ವಿಚಾರಣಾ ನ್ಯಾಯಾಲಯದಲ್ಲಿ ಲತಾ ಮನವಿ ಮಾಡಿದ್ದರು. ಈ ಸಂಬಂಧ ಖುದ್ದು ಹಾಜರಿಗೆ ನ್ಯಾಯಾಲಯ ನಿರ್ದೇಶನ ನೀಡಿ ಆದೇಶಿಸಿದೆ.

ಇದನ್ನೂ ಓದಿ: 'ಗ್ರಾಪಂ​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಳಿಕ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ಮಂಡಿಸಲು 15 ತಿಂಗಳ ಮಿತಿ ಇಲ್ಲ'

Last Updated : Dec 4, 2023, 4:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.