ಬೆಂಗಳೂರು: ಮಾಜಿ ಶಾಸಕ ಹಾಗೂ ಜೆಡಿಎಸ್ ಪ್ರಚಾರ ಸಮಿತಿಯ ಅಧ್ಯಕ್ಷ ವೈ.ಎಸ್.ವಿ.ದತ್ತ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಹಲವು ಬಾರಿ ಸಮನ್ಸ್ ನೀಡಿದರೂ ವೈ.ಎಸ್.ವಿ. ದತ್ತ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ವಿಚಾರಣೆಗೆ ಹಾಜರಾಗುವಂತೆ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ. ಬೇಲೂರು ಆರ್ ಸುಬ್ರಮಣ್ಯ ಎಂಬುವರ ಬಳಿ 5 ಲಕ್ಷ ಹಣ ಪಡೆದಿದ್ದ ದತ್ತ ಅವರು ವಾಪಸ್ಸು ಹಣ ನೀಡಲು ಚೆಕ್ ನೀಡಿ ಬಳಿಕ ಆ ಚೆಕ್ ಬೌನ್ಸ್ ಆಗಿತ್ತು.
ಮತ್ತೊಂದು ಪ್ರಕರಣದಲ್ಲಿ ಕೆ.ಜಿ.ರಾಮರೆಡ್ಡಿ ಬಳಿ ಹಣ ಪಡೆದು ವಾಪಸ್ಸು ನೀಡಿದ ಚೆಕ್ ಬೌನ್ಸ್ ಕೇಸ್ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.