ETV Bharat / state

ಬಾಲಕಿ ಅಪಹರಿಸಿ ಬಾಲ್ಯ ವಿವಾಹವಾಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

author img

By

Published : Apr 20, 2022, 6:07 PM IST

1ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶೆ ಎನ್.ರೂಪ ಅವರು, ಬಾಲಕಿ ಅಪಹರಿಸಿ ಬಾಲ್ಯ ವಿವಾಹವಾಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ, ಸಂತ್ರಸ್ತೆಗೆ 4 ಲಕ್ಷ ರೂ ಪರಿಹಾರ ನೀಡುವಂತೆ ಕೆಎಸ್ಎಲ್ಎಸ್ಎಗೆ ನಿರ್ದೇಶಿಸಿದ್ದಾರೆ.

Court sentenced life imprisonment to the Accuse who married minor girl
ಬಾಲ್ಯ ವಿವಾಹ

ಬೆಂಗಳೂರು: ಅತ್ಯಾಚಾರ ಹಾಗೂ ಬಾಲ್ಯ ವಿವಾಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ, ನಗರದ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ. ಕಮ್ಮನಹಳ್ಳಿ ನಿವಾಸಿ ಹರೀಶ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ವಿರುದ್ಧದ ಅಪರಾಧಗಳು ಸಾಬೀತಾಗಿದ್ದು 1ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶೆ ಎನ್.ರೂಪ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ, ಸಂತ್ರಸ್ತ ಬಾಲಕಿಗೆ 4 ಲಕ್ಷ ಪರಿಹಾರ ನೀಡುವಂತೆ ಕೆಎಸ್ಎಲ್ಎಸ್ಎಗೆ ನಿರ್ದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಮಂಗಮ್ಮನಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಹರೀಶ್ ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದ. ಬಳಿಕ ಆಕೆಯನ್ನು ಅಪಹರಿಸಿ ಮೆಜೆಸ್ಟಿಕ್​ನ ದೇವಸ್ಥಾನವೊಂದರಲ್ಲಿ ಅರಿಶಿನ ಕೊಂಬಿರುವ ದಾರ ಕಟ್ಟಿ ಕರೆದೊಯ್ದು ಅತ್ಯಾಚಾರ ಎಸಗಿದ್ದ. ನಂತರ ತಿರುಪತಿ, ಚೆನ್ನೈ, ಮಡಿಕೇರಿ ಮತ್ತಿತರೆಡೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಬೆಂಗಳೂರಿಗೆ ವಾಪಸ್​ ಆಗಿ ಬಾಡಿಗೆ ಮನೆಯಲ್ಲಿರಿಸಿಕೊಂಡು ಅತ್ಯಾಚಾರ ಎಸಗಿದ್ದ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.

ಇದನ್ನೂ ಓದಿ: ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 6 ಮಂದಿ ಸಾವು

ಪೋಷಕರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 366ಎ (ಅಪಹರಣ) 376(ಅತ್ಯಾಚಾರ), ಬಾಲ್ಯ ವಿವಾಹ ಕಾಯ್ದೆಯ ಸೆಕ್ಷನ್ 9 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯ ಸೆಕ್ಷನ್ 3 (2) (5) ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಅಭಿಯೋಜನೆ ಪರ ಸರ್ಕಾರಿ ಅಭಿಯೋಜಕಿ ಪಿ. ಕೃಷ್ಣವೇಣಿ ವಾದ ಮಂಡಿಸಿದ್ದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.