ಬೆಂಗಳೂರು: ರಾಜ್ಯದಲ್ಲಿಂದು 1,386 ಮಂದಿಗೆ ಹೊಸದಾಗಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28,72,684 ತಲುಪಿದೆ. ಇಂದು 1,09,399 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ.
ಪಾಸಿಟಿವಿಟಿ ದರ ಶೇ 1.26 ರಷ್ಟಿದೆ. ಇಂದು 3,204 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 28,01,907 ಜನರು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 34,858 ಸಕ್ರಿಯ ಪ್ರಕರಣಗಳಿವೆ. ಇಂದು 61 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 35,896ಕ್ಕೆ ಏರಿದೆ.
ಸಾವಿನ ಶೇಕಡಾವಾರು ಪ್ರಮಾಣ 4.40 ರಷ್ಟಿದೆ. ಯುಕೆಯಿಂದ 361 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ: ಕಳೆದ 24 ಗಂಟೆಯಲ್ಲಿ 37,154 ಕೇಸ್ ಪತ್ತೆ