ETV Bharat / state

ಕೋವಿಡ್‌, ಡೆಂಗಿ ಹೆಚ್ಚಳ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಕ್ರಮ ಪಾಲಿಸಿ: ಸಚಿವ ಸುಧಾಕರ್‌

author img

By

Published : Jun 13, 2022, 10:47 PM IST

ಬೆಂಗಳೂರಿನಲ್ಲಿ ಕೋವಿಡ್ ಮತ್ತು ಡೆಂಗೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

covid-and-dengue-cases-are-increased-in-banglore-public-should-take-precautions
ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ, ಬಿಎಂಸಿಐನಲ್ಲಿ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಕ್ಕೆ ಸೂಚನೆ : ಸಚಿವ ಡಾ. ಸುಧಾಕರ್

ಬೆಂಗಳೂರು: ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್‌ ಡೋಸ್‌ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜೊತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿಡಲು ಸಾಧ್ಯವಿದೆ ಎಂದರು. ಇಲಾಖೆಯು ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದು ಕೂಡ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸೋಂಕು ಪ್ರಮಾಣ ಹೆಚ್ಚಳ: ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಇದರ ಜೊತೆಗೆ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ ಸಹಕಾರಿಯಾಗಿದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು.

ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಾಳೆ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜೊತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್‌ ತಿಳಿಸಿದರು.

ಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ: ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ ಎಂದು ಸಚಿವ ಡಾ. ಕೆ. ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕರೆಯುವುದೇ ತಪ್ಪಾ? ಉನ್ನತ ಸ್ಥಾನದಲ್ಲಿ ಇದ್ದವರಿಗೆ ಒಂದು ಕಾನೂನು ಶ್ರೀಸಾಮಾನ್ಯನಿಗೆ ಮತ್ತೊಂದು ಕಾನೂನು ಇಲ್ಲ. ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ ಎಂಬ ಸಾಮಾನ್ಯ ಜ್ಞಾನ ಅವರಿಗೆ ಇದ್ದಂತಿಲ್ಲ ಎಂದು ಪ್ರತಿಕ್ರಿಯೆ ನೀಡಿದರು. ಈ ನೆಲದ ಕಾನೂನು ಗೌರವಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಮತ್ತು ಜವಾಬ್ದಾರಿ. ಇದನ್ನು ಉನ್ನತ ಸ್ಥಾನಗಳನ್ನು ಅಲಂಕರಿಸಿರುವವರು ಪಾಲಿಸುವ ಮೂಲಕ ಮೇಲ್ಪಂಕ್ತಿ ಹಾಕಿಕೊಡಬೇಕು. ಅದನ್ನು ಬಿಟ್ಟು ಅವರೇ ಕಾನೂನು ಉಲ್ಲಂಘನೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದಂತೆ ಎಂದು ಆರೋಪಿಸಿದರು.

ಈ ಹಿಂದೆ ಪ್ರಧಾನಿ ಹುದ್ದೆ ಅಲಂಕರಿಸಿದ್ದವರೇ ವಿಚಾರಣೆಗಳಿಗೆ ಹಾಜರಾಗಿದ್ದ ನಿದರ್ಶನಗಳಿವೆ. ಪ್ರತಿಭಟಿಸಿದ ಕಾಂಗ್ರೆಸ್‌ ನಾಯಕರು ಅದನ್ನು ಮರೆತಂತಿದೆ. ಯಾವುದೇ ಸಂವಿಧಾನಬದ್ಧ ಹುದ್ದೆಗಳಲ್ಲಿರುವವರೇ ಕಾನೂನು ಗೌರವಿಸುವುದಿಲ್ಲ ಎಂದರೆ ಹೇಗೆ? ಇದು ಕಾಂಗ್ರೆಸ್ಸಿಗರ ಸಂಸ್ಕೃತಿ ಮತ್ತು ಮನೋಭಾವ. ಕಾಂಗ್ರೆಸ್ಸಿಗರಲ್ಲಿ ದೊಡ್ಡವರಿಗೊಂದು ಜನಸಾಮಾನ್ಯರಿಗೆ ಒಂದು ಕಾನೂನು ಮಾಡುವ ಯೋಚನೆ ಹೊಂದಿದ್ದರೂ ಇರಬಹುದು ಎಂದು ಲೇವಡಿ ಮಾಡಿದರು.
ಪ್ರತಿಭಟನೆ ಹೆಸರಿನಲ್ಲಿ ಇಂದು ಕಾಂಗ್ರೆಸ್‌ ಮುಖಂಡರು ನಡೆಸಿರುವ ದಾಂಧಲೆಯಿಂದ ನಗರದಲ್ಲಿ ಸಾರ್ವಜನಿಕರ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ಫ್ರೀಡಂಪಾರ್ಕಿನ ಬಳಿ ಅನುಮತಿ ಪಡೆದು ಪ್ರತಿಭಟನೆ ನಡೆಸಬೇಕು ಎಂಬ ಕೋರ್ಟ್‌ ನಿರ್ದೇಶನವನ್ನೂ ಉಲ್ಲಂಘಿಸಿದ್ದಾರೆ. ಸರ್ಕಾರ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನದೇ ಆದ ಕ್ರಮ ಜರುಗಿಸಲಿದೆ ಎಂದರು.

ಇದನ್ನೂ ಓದಿ: ಮಂಗಳೂರಿನಲ್ಲಿದೆ ದೇಶದ ಮೊದಲ ರಾತ್ರಿ ಪ್ರೌಢಶಾಲೆ: 80 ವರ್ಷದಲ್ಲಿ ಸಾವಿರಾರು ಮಂದಿಗೆ ಸಿಕ್ಕಿದೆ ವಿದ್ಯಾಭ್ಯಾಸ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.