ETV Bharat / state

ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ?: ತೇಜಸ್ವಿ ಸೂರ್ಯಗೆ ಸಿದ್ದು ಪ್ರಶ್ನೆ

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್​​​ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್. ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : May 5, 2021, 12:32 PM IST

ಬೆಂಗಳೂರು: ರಾಜ್ಯ ಬಿಜೆಪಿ ಸಂಸದರು ಹಾಗೂ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿರುವ ದೊಡ್ಡ ವ್ಯಕ್ತಿಗಳನ್ನು ರಕ್ಷಣೆ ಮಾಡಲು ಮುಂದಾಗಿದ್ದಾರಾ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

  • .@Tejasvi_Surya, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ,
    ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು @BJP4Karnataka ಶಾಸಕರು‌,ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?1/11

    — Siddaramaiah (@siddaramaiah) May 5, 2021 " class="align-text-top noRightClick twitterSection" data=" ">

ಟ್ವೀಟ್​ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ.‌ ವಿಧಾನಸೌಧದಲ್ಲಿ ಕುಳಿತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ರಾಜ್ಯ ಬಿಜೆಪಿ ಶಾಸಕರು‌ ಹಾಗೂ ಸಂಸದರ ವಿರುದ್ಧ. ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಸುದ್ದಿಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದಿರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ತೇಜಸ್ವಿ ಸೂರ್ಯ? ಎಂದು ಕೇಳಿದ್ದಾರೆ.

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್​ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 'ಯಥಾ ರಾಜಾ ತಥಾ‌ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ ನರೇಂದ್ರ ಮೋದಿ ಅವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡುತ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ ತೇಜಸ್ವಿ ಸೂರ್ಯ? ಎಂದು ಪ್ರಶ್ನಿಸಿದ್ದಾರೆ.

  • 'ಯಥಾ ರಾಜಾ ತಥಾ‌ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ @narendramodi ಅವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ @Tejasvi_Surya ? 6/11#Corona

ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಯನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ ತೇಜಸ್ವಿ ಸೂರ್ಯ? ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ ತೇಜಸ್ವಿ ಸೂರ್ಯ ಎಂದಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ. ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ‌. ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿ ಅವರ ಅಚ್ಚೇ ದಿನ್ ತೇಜಸ್ವಿ ಸೂರ್ಯ?

ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ನರೇಂದ್ರ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ? ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಬಿ.ಎಸ್.ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ.

ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ನರೇಂದ್ರ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಓದಿ: ಬೆಡ್ ಬ್ಲಾಕಿಂಗ್ ದಂಧೆ ಬಯಲು ಬೆನ್ನಲ್ಲೇ ಬೆಂಗಳೂರಿನ ಆಸ್ಪತ್ರೆಗಳಲ್ಲಿ 3,210 ಬೆಡ್‌ಗಳು ಲಭ್ಯ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.