ETV Bharat / state

ರಾಜಧಾನಿಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ, ಕೇರಳ ಪ್ರಯಾಣಿಕರ ಮೇಲೆ ನಿಗಾ: ಗೌರವ್ ಗುಪ್ತ

author img

By

Published : Aug 5, 2021, 8:43 PM IST

ರಾಜಧಾನಿಯಲ್ಲಿ ಕೋವಿಡ್​ ಪ್ರಕರಣಗಳು ನಿಯಂತ್ರದಲ್ಲಿವೆ. ಕೊರೊನಾ ಅಲೆಗಳನ್ನು ಸೂಕ್ತವಾಗಿ ನಿರ್ವಹಿಸಲಾಗುವುದು. ಇನ್ನು ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ
BBMP Commissioner Gaurav Gupta

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣದಲ್ಲಿವೆ. ತಜ್ಞರ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ಅಲೆಗಳನ್ನು ನಿಯಂತ್ರಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ

ಕಚೇರಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳನ್ನು ಕೋವಿಡ್​​ನಿಂದ ರಕ್ಷಿಸಲು ಪೋಷಕರ ಪಾತ್ರ ಪ್ರಮುಖವಾಗಿದೆ. ಎಲ್ಲ ಪೋಷಕರೂ ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದರು.

ನಗರ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ, ಮೊದಲಿನಿಂದಲೂ ಜಾರಿಯಲ್ಲಿದ್ದು, ಪರಿಣಾಮಕಾರಿ ಜಾರಿಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳೊಂದಿಗೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಕೇರಳ ಪ್ರಯಾಣಿಕರ ಆರ್​​ಟಿ-ಪಿಸಿಆರ್ ಕೋವಿಡ್ ಸೋಂಕು ಪರೀಕ್ಷೆ ಮಾಡಲು ಪ್ರತ್ಯೇಕ 11 ತಂಡಗಳ ರಚನೆ ಮಾಡಲಾಗಿದೆ. ಕೋವಿಡ್ ನಿಯಮಗಳಂತೆ ಟೆಸ್ಟ್ ರಿಪೋರ್ಟ್ ಇಲ್ಲದಿದ್ದರೆ ಕಡ್ಡಾಯ ಕ್ವಾರಂಟೈನ್ ಮಾಡಿ ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ಓದಿ: ಹಿರಿಯ IAS ಅಧಿಕಾರಿಗಳ ವರ್ಗಾವಣೆ..ರಾಜ್ಯ ಸರ್ಕಾರದಿಂದ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.