ಬೆಂಗಳೂರು: ದೇಶದಲ್ಲಿ ಮೊದಲೆರಡು ಕೋವಿಡ್ ರೂಪಾಂತರಿ ಒಮಿಕ್ರೋನ್ ವೈರಸ್ ಪತ್ತೆಯಾಗಿದ್ದು, ಇವರದಲ್ಲಿ ಎರಡನೇ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೆ ಕೋವಿಡ್ ದೃಢಪಟ್ಟಿದೆ. ಇವರೆಲ್ಲರ ಮಾದರಿಗಳ ಜೀನೋಮ್ ಸೀಕ್ವೆನ್ಸ್ ಪರೀಕ್ಷೆ ನಡೆಸಲು ಲ್ಯಾಬ್ಗೆ ಕಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಒಮಿಕ್ರೋನ್ ಪತ್ತೆಯಾದ ಬೆನ್ನಲ್ಲೇ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾಧ್ಯಮಗೋಷ್ಠಿ ನಡೆಸಿದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ದಕ್ಷಿಣ ಆಫ್ರಿಕಾದಿಂದ ಬಂದಿಳಿದ ಒಬ್ಬರು ಪ್ರಯಾಣಿಕರಲ್ಲಿ ಹಾಗೂ ಟ್ರಾವೆಲ್ ಹಿಸ್ಟರಿ ಇಲ್ಲದ ಬೆಂಗಳೂರು ಮೂಲದ ವ್ಯಕ್ತಿಯಲ್ಲಿಯೂ ಕೋವಿಡ್ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದರು.
ಒಮಿಕ್ರೋನ್ ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಕೂಡಾ ಪರೀಕ್ಷೆಗೊಳಪಡಿಸಲಾಗಿದೆ. ಒಮಿಕ್ರೋನ್ 2ನೇ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಎರಡನೇ ಕೇಸ್ ಬೆಂಗಳೂರು ಮೂಲ:
ಎರಡನೇ ಪ್ರಕರಣದಲ್ಲಿ ಬೆಂಗಳೂರು ಮೂಲದ 46 ವರ್ಷದ ವ್ಯಕ್ತಿಗೆ ನ. 22ರಂದು ಪಾಸಿಟಿವ್ ಬಂದಿದೆ. ಆದರೆ ಆತಂಕದ ವಿಚಾರ ಎಂದರೆ ಈತನಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಇದು ಬಾರಿ ಆತಂಕದ ವಿಚಾರವಾಗಿದ್ದು, ಇವರ ಸಂರ್ಪಕ್ಕೆ ಬಂದ ಐವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಇನ್ನೂ ಹೆಚ್ಚಿನ ಜನರಿಗೆ ಒಮಿಕ್ರೋನ್ ಇರೋ ಸಾಧ್ಯತೆ ಇದೆ, ಜನ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಪತ್ತೆಯಾಗಿರುವ ಒಮಿಕ್ರೋನ್ ಸೋಂಕಿತರ ಬಗ್ಗೆ ಮಾಹಿತಿ ನೀಡಿದ ಗೌರವ್ ಗುಪ್ತಾ