ETV Bharat / state

ಮಹಿಳೆ, ಮಕ್ಕಳಲ್ಲಿ ಕೋವಿಡ್ ಹಠಾತ್​​ ಏರಿಕೆ: ಬೆಂಗಳೂರಿನ ಎರಡು ಆಸ್ಪತ್ರೆ ಸೋಂಕಿತರಿಗೆ ಮೀಸಲು - ಮಹಿಳೆ ಮಕ್ಕಳಲ್ಲಿ ಕೋವಿಡ್ ಪ್ರಕರಣ ಹಠಾತ್​​ ಏರಿಕೆ

ಬೆಂಗಳೂರಿನಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕೊರೊನಾ ಕಾಣಿಸಿಕೊಳ್ಳುತ್ತಿರುವ ಕಾರಣ ಇದೀಗ ಎರಡು ಆಸ್ಪತ್ರೆಗಳನ್ನು ಕೋವಿಡ್​ಗೆ ಮೀಸಲಿಡಲಾಗಿದ್ದು, ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

Covid crisis in Bengaluru
Covid crisis in Bengaluru
author img

By

Published : Jan 10, 2022, 10:45 PM IST

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿಗೆ ಸಾವಿರಾರು ಜನರು ತುತ್ತಾಗುತ್ತಿದ್ದಾರೆ. ಹೀಗಾಗಿ ರೆಡ್​ ಝೋನ್ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಾಗುತ್ತಿರುವ ಕಾರಣಕ್ಕಾಗಿ ಇದೀಗ ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಚೈಲ್ಡ್ ಹೆಲ್ತ್ ಮತ್ತು ಘೌಸಿಯಾ ಹೆರಿಗೆ ಆಸ್ಪತ್ರೆಯನ್ನು ಶಿಶು ವೈದ್ಯಕೀಯ ಮತ್ತು ಗರ್ಭಿಣಿ ಮಹಿಳೆಯ ಪ್ರಕರಣಗಳ ಚಿಕಿತ್ಸೆಗಾಗಿ ಕೋವಿಡ್-19 ಆಸ್ಪತ್ರೆ ಎಂದು ಘೋಷಿಸಲಾಗಿದೆ.

ಮಕ್ಕಳು ಮತ್ತು ಮಹಿಳೆಯರಲ್ಲಿ ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾರಣ ಈ ಎರಡು ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.