ಬೆಂಗಳೂರು: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೋವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದಾಗಿದೆ. ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಏಪ್ರಿಲ್ 5 ರಂದು ಮೋದಿ ರಾಜ್ಯಕ್ಕೆ ಆಗಮಿಸಲಿದ್ದರು.
ಪ್ರಧಾನಿ ನರೇಂದ್ರ ಮೋದಿ ಪ್ರವಾಸ ರದ್ದುಗೊಂಡಿರುವ ಹಿನ್ನೆಲೆ ಮತ್ತೊಂದು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಏ. 5 ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಆದ್ರೆ ನಫ್ತಾಲಿ ಬೆನೆಟ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಮೋದಿ ರಾಜ್ಯ ಭೇಟಿ ರದ್ದುಗೊಂಡಿದೆ.
ಇದನ್ನೂ ಓದಿ: SSLC ಪರೀಕ್ಷೆ: 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು.. ಹಿಜಾಬ್ ತೆಗೆಯದ ಮೇಲ್ವಿಚಾರಕಿ ಅಮಾನತು
ಏಪ್ರಿಲ್ 5 ರಂದು 3 ಕಾರ್ಯಕ್ರಮಗಳಲ್ಲಿ ಮೋದಿ ಮತ್ತು ಬೆನೆಟ್ ಪಾಲ್ಗೊಳ್ಳಬೇಕಿತ್ತು. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಟಾಟಾ ಸಹಭಾಗಿತ್ವದಲ್ಲಿ ಮೇಲ್ದರ್ಜೆಗೇರಿಸಿದ 150 ಐಟಿಐ ಕಾಲೇಜುಗಳ ಉದ್ಘಾಟನೆ ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಇದೀಗ ನಿಗದಿತ ಪ್ರವಾಸ ರದ್ದುಗೊಂಡಿದೆ.