ಬೆಂಗಳೂರು: ರಾಜ್ಯದಲ್ಲಿ 12,442 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 659 ಮಂದಿಗೆ ಸೋಂಕು ದೃಢಪಟ್ಟಿದೆ. 1,192 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 7,324. ಸೋಂಕಿತರ ಪ್ರಮಾಣ ಶೇ. 5.29 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 4.68 ಇದೆ. ವಿಮಾನ ನಿಲ್ದಾಣದಿಂದ 3,636 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 450 ಮಂದಿಗೆ ಕೋವಿಡ್ ದೃಢಪಟ್ಟಿದೆ. 637 ಮಂದಿ ಬಿಡುಗಡೆಯಾಗಿದ್ದಾರೆ. ಇಂದು ಒಬ್ಬರು ಮೃತಪಟ್ಟಿದ್ದಾರೆ. ಸಕ್ರಿಯ ಸೋಂಕಿತ ಪ್ರಕರಣಗಳ ಸಂಖ್ಯೆ 4,723.
ಇದನ್ನೂ ಓದಿ: ಕೊರೊನಾದಿಂದ ಗುಣಮುಖ: ದುಬೈನಲ್ಲಿ ಭಾರತ ತಂಡ ಸೇರಿದ ಕೋಚ್ ರಾಹುಲ್ ದ್ರಾವಿಡ್