ಬೆಂಗಳೂರು: ರಾಜ್ಯದಲ್ಲಿ 19,028 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 845 ಮಂದಿಗೆ ಸೋಂಕು ದೃಢಪಟ್ಟಿದೆ. 1,389 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಐವರು ಮೃತಪಟ್ಟಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 6,775. ಸೋಂಕಿತರ ಪ್ರಮಾಣ ಶೇ.4.44 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ.4.46 ಇದೆ. ವಾರದ ಸಾವಿನ ಪ್ರಮಾಣ ಶೇ.0.32 ರಷ್ಟಿದೆ. ವಿಮಾನ ನಿಲ್ದಾಣದಿಂದ 4,198 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.
ಬೆಂಗಳೂರು ಕೋವಿಡ್ ವರದಿ: ನಗರದಲ್ಲಿ 589 ಮಂದಿಗೆ ಕೋವಿಡ್ ದೃಢಪಟ್ಟಿದೆ. 879 ಮಂದಿ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ ಶೂನ್ಯ. ಸಕ್ರಿಯ ಪ್ರಕರಣಗಳ ಸಂಖ್ಯೆ 4,433.
ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಇಲ್ಲದೇ ಇಂಪೆಲ್ಲಾ ಹಾರ್ಟ್ ಪಂಪ್ ಮೂಲಕ ಚಿಕಿತ್ಸೆ.. ಮೂವರು ವೃದ್ಧರಿಗೆ ಜೀವದಾನ