ETV Bharat / state

ರಾಜ್ಯದಲ್ಲಿ ಕೋವಿಡ್ 2ನೇ ಅಲೆಯ ಆತಂಕ - ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಗಳೇನು? - ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ

ವಿದೇಶಗಳಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಮತ್ತೆ ಏರುಗತಿ ಪಡೆದ ಕಾರಣ ರಾಜ್ಯದಲ್ಲಿಯೂ ಎರಡನೇ ಅಲೆಯ ಆತಂಕ ಶುರುವಾಗಿದೆ. ಇದಕ್ಕೆ ಪೂರಕವಾಗಿ ತಜ್ಞರು ಅಧ್ಯಯನ ನಡೆಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Covid
ಕೋವಿಡ್
author img

By

Published : Dec 2, 2020, 6:45 PM IST

ಬೆಂಗಳೂರು: ರಾಜ್ಯದಲ್ಲಿ 2021ರ ಜನವರಿ, ಅಥವಾ ಫೆಬ್ರವರಿಯಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದನ್ನು ಎದುರಿಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದೆ.

ಕೋವಿಡ್ ಹರಡುವಿಕೆ ಪ್ರಮಾಣದಲ್ಲಿ ಏರಿಳಿತದ ಬಳಿಕ ಅನ್ಯ ರಾಜ್ಯ ಹಾಗೂ ವಿದೇಶಗಳಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಮತ್ತೆ ಏರುಗತಿ ಪಡೆದ ಕಾರಣ ರಾಜ್ಯದಲ್ಲಿಯೂ ಎರಡನೇ ಅಲೆಯ ಆತಂಕ ಶುರುವಾಗಿದೆ. ಇದಕ್ಕೆ ಪೂರಕವಾಗಿ ತಜ್ಞರು ಅಧ್ಯಯನ ನಡೆಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಪತ್ತೆ ಹಾಗೂ ನಿಯಂತ್ರಣಕ್ಕೆ ಸಲಹೆ ಶೀರ್ಷಿಕೆಯ 7 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ‌. ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಏಳು ದಿನಗಳ ಸರಾಸರಿ ಪ್ರಕರಣಗಳ ಸಂಖ್ಯೆ ಹಾಗೂ ವೈರಾಣುಗಳು ದ್ವಿಗುಣವಾಗುವ ಸಂಖ್ಯೆಯನ್ನು ಈ ವೇಳೆ ಸೂಕ್ಷ್ಮವಾಗಿ ಗುರುತಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಿದೆ.

ಸಲಹೆಗಳು :

  1. ಡಿ.26 ರಿಂದ ಜ.1 ರವರೆಗೆ ಸಾರ್ವಜನಿಕವಾಗಿ ಹೊಸವರ್ಷ ಆಚರಿಸದಂತೆ ನಿಷೇಧಿಸಿ, ರಾತ್ರಿ ಎಂಟು ಗಂಟೆಯ ನಂತರ ಕರ್ಫ್ಯೂ ವಿಧಿಸಬೇಕು.
  2. ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ಸೇವೆ ಮತ್ತು ಸೌಲಭ್ಯ ಒದಗಿಸಲು ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಬೇಕು.
  3. ಡಿಸೆಂಬರ್ ಅಂತ್ಯಕ್ಕೆ ಕೋವಿಡ್ ಪ್ರಕರಣಗಳನ್ನು ಆಧರಿಸಿ ಜನವರಿಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು.
  4. ಸಾರ್ವಜನಿಕ ಕಾರ್ಯಕ್ರಮಗಳು, ಸಮಾರಂಭಗಳು, ಹಾಗೂ ಉತ್ಸವಗಳಿಗೆ ನಿರ್ಬಂಧ ಮುಂದುವರಿಸಿ ಸೀಮಿತ ಸಂಖ್ಯೆಯಲ್ಲಿ ಜನ ಸೇರಲು ಅವಕಾಶ ನೀಡಬೇಕು.
  5. ಈಜುಕೊಳ, ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧವನ್ನು ಫೆಬ್ರವರಿವರೆಗೆ ಮುಂದುವರಿಸಬೇಕು.
  6. ಫೆಬ್ರವರಿ ಅಂತ್ಯದವರೆಗೂ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 1.25 ಲಕ್ಷ ಆರ್ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಬೇಕು.
  7. ಹದಿನೈದು ದಿನಗಳಿಗೊಮ್ಮೆ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಇತರರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕಿದೆ.
  8. ಕಳೆದ ಅಕ್ಟೋಬರ್ ಅವಧಿಯಲ್ಲಿ ಕೋವಿಡ್ ಚಿಕಿತ್ಸೆಗೆ ಸಜ್ಜುಗೊಳಿಸಿದ್ದ ವೈದ್ಯಕೀಯ ಸೌಲಭ್ಯಗಳನ್ನು ಜನವರಿ ಮೊದಲ ವಾರದ ವೇಳೆಗೆ ಪುನಃ ಸಿದ್ಧಪಡಿಸಿಕೊಳ್ಳಬೇಕು.

ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್, ಐಸಿಯು ಸೌಲಭ್ಯ, ಆಂಬುಲೆನ್ಸ್ ಸೇರಿದಂತೆ ವಿವಿಧ ಸೌಕರ್ಯಗಳು ಸಕಲ ರೀತಿಯಲ್ಲೂ ಸಜ್ಜಾಗಿರಬೇಕು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.