ಬೆಂಗಳೂರು: ರಾಜ್ಯ ಸರ್ಕಾರ ಈಗಾಗಲೇ ಕಾಲೇಜು ತರಗತಿಗಳ ಆರಂಭಕ್ಕೆ ನವೆಂಬರ್ 17ರಿಂದ ಅನುಮತಿ ನೀಡಿದೆ. ಆದರೆ ವಿದ್ಯಾರ್ಥಿಗಳು, ಶಿಕ್ಷಕರು ಕೋವಿಡ್ ನೆಗೆಟಿವ್ ರಿಪೋರ್ಟ್ ಸಲ್ಲಿಕೆ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕಾಲೇಜು ಆರಂಭದ 72 ಗಂಟೆಗೆ ಮೊದಲು ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು, ಕಾಲೇಜು ಹಾಗೂ ಹಾಸ್ಟೆಲ್ಗಳ ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು. ವಿದ್ಯಾರ್ಥಿಗಳು, ಶಿಕ್ಷಕರು ಕೋವಿಡ್ ನೆಗೆಟಿವ್ ರಿಪೋರ್ಟ್ ಸಲ್ಲಿಕೆ ಮಾಡಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ.

ಕೋವಿಡ್ ಟೆಸ್ಟ್ಗೆ ಅಗತ್ಯವಿರುವ ಸಿದ್ಧತೆಗಳು, ಗಂಟಲು ದ್ರವದ ಸ್ಯಾಂಪಲ್ ಸಂಗ್ರಹ ಹಾಗೂ ಪರೀಕ್ಷೆಗೆ ಅಗತ್ಯವಿರುವ ಆರೋಗ್ಯ ಸಿಬ್ಬಂದಿಯನ್ನು ತಕ್ಷಣ ನೇಮಿಸಿ ತ್ವರಿತವಾಗಿ ಟೆಸ್ಟಿಂಗ್ ನಡೆಯಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.