ಬೆಂಗಳೂರು: ರಾಜ್ಯದಲ್ಲಿ ಇಂದು 1,66,631 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 2,743 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ.
ಪಾಸಿಟಿವಿಟಿ ದರ 1.64% ರಷ್ಟಿದೆ. 3,081 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 27,87,111 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 39,603 ಸಕ್ರಿಯ ಪ್ರಕರಣಗಳಿವೆ. ಇಂದು 75 ಮಂದಿ ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 35,601ಕ್ಕೇರಿದೆ. ಸಾವಿನ ಶೇಕಡಾವಾರು ಪ್ರಮಾಣ 2.73 ರಷ್ಟಿದೆ. ಯುಕೆಯಿಂದ 750 ಪ್ರಯಾಣಿಕರು ಆಗಮಿಸಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ 43,733 ಹೊಸ ಕೋವಿಡ್ ಕೇಸ್: ಚೇತರಿಕೆ ಪ್ರಮಾಣ ಶೇ. 97ಕ್ಕೆ ಏರಿಕೆ