ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ. ಇಂದಿನಿಂದ ಎಲ್ಲರಿಗೂ ಕೊರೊನಾ ಲಸಿಕೆ ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದಾರೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪಾಲಿಕೆ ವಿಶೇಷ ಆಯುಕ್ತರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಮಾಲ್, ಚಿತ್ರಮಂದಿರ ಹಾಗೂ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಜನದಟ್ಟಣೆಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಎಂದರು.
ಮಾಸ್ಕ್ ಕಡ್ಡಾಯದ ಜೊತೆಗೆ ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೆಟ್ ಪರಿಶೀಲನೆ ಮಾಡಲು ಮಾರ್ಷಲ್‌ಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೆಟ್ ಹೊಂದಿರುವುದನ್ನು ಎಲ್ಲೆಡೆ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬುಧವಾರ 358 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ರಾಜಧಾನಿಯಲ್ಲಿ ಸದ್ಯ 2,526 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ: ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ಕೋವಿಡ್.. 7 ಸಾವಿರದ ಗಡಿ ದಾಟಿದ ಹೊಸ ಪ್ರಕರಣಗಳು!