ETV Bharat / state

ನಾಳೆಯಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್ - ನಾಳೆಯಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ

ಈಗಾಗಲೇ ನೋಂದಾಯಿಸಿಕೊಂಡಿರುವ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು. ಕೋವಿನ್‌ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ದೊರೆಯಲಿದೆ. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್
author img

By

Published : May 9, 2021, 12:08 PM IST

ಬೆಂಗಳೂರು: ನಾಳೆಯಿಂದ ಈಗಾಗಲೇ ನೋಂದಾಯಿಸಿಕೊಂಡಿರುವ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್‌ಸಿ.ವಿ.ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ವಿವರಿಸಿದರು.

  • ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು.

    1/4

    — Dr Sudhakar K (@mla_sudhakar) May 9, 2021 " class="align-text-top noRightClick twitterSection" data=" ">

18-44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿಡ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರತಿ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು, ಅದರಲ್ಲೂ ವಿಶೇಷವಾಗಿ ಯುವಮಿತ್ರರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು. ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

18-44 ವರ್ಷವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮೇ 1 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕ ಚಾಲನೆ ನೀಡಿದ್ದರು. ರಾಜ್ಯದಲ್ಲಿ 3.26 ಕೋಟಿ ಈ ವಯೋಮಾನದವರಿದ್ದಾರೆ. ಎಲ್ಲರಿಗೂ 6.52 ಕೋಟಿ ಡೋಸ್ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ 2 ಕೋಟಿ ಕೋವಿಶೀಲ್ಡ್ ಡೋಸ್ ಹಾಗೂ 1 ಕೋಟಿ ಕೋವ್ಯಾಕ್ಸಿನ್ ಡೋಸ್ ಪೂರೈಕೆಗೆ ಬೇಡಿಕೆ ಇಡಲಾಗಿದೆ. ಸೀರಂ ಸಂಸ್ಥೆಯಿಂದ ಈವರೆಗೆ 6.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲಾಗಿದೆ. ಇನ್ನಷ್ಟು ಲಸಿಕೆ ಮೇ 2 ಅಥವಾ ಮೂರನೇ ವಾರ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ನಿನ್ನೆಯೂ ದೇಶದಲ್ಲಿ 4 ಸಾವಿರ ಸೋಂಕಿತರು ಸಾವು: ಮತ್ತೆ 4 ಲಕ್ಷ ಕೋವಿಡ್​ ಕೇಸ್​ ದಾಖಲು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.