ETV Bharat / state

ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ಬಿಜೆಪಿ ಕಚೇರಿಗಳಲ್ಲಿ ಗೋಪೂಜೆ ಮೂಲಕ ಸ್ವಾಗತ - Cooperative Minister S. T. Somashekhar Worship cow

ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಗೋಪೂಜೆಗೆ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಆಯಾ ಜಿಲ್ಲೆಗಳ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಗೋ ಪೂಜೆಗಳನ್ನು ಇಂದು ರಾಜ್ಯಾದ್ಯಂತ ನೆರವೇರಿಸುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಗೋಪೂಜೆಗೆ ಚಾಲನೆ
ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಗೋ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಗೋಪೂಜೆಗೆ ಚಾಲನೆ ಪೂಜೆಗೆ ಚಾಲನೆ
author img

By

Published : Dec 10, 2020, 12:17 PM IST

Updated : Dec 10, 2020, 12:43 PM IST

ಬೆಂಗಳೂರು: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಕಚೇರಿಗಳಲ್ಲಿ ಗೋ ಪೂಜೆ ನೆರವೇರಿಸಲಾಗುತ್ತಿದೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಗೋಪೂಜೆಗೆ ಚಾಲನೆ ನೀಡಲಾಗಿದ್ದು, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಗೋ ಪೂಜೆ ಮಾಡುವ ಮೂಲಕ ವಿಧೇಯಕವನ್ನು ಸ್ವಾಗತಿಸಿ, ರಾಜ್ಯಾದ್ಯಂತ ಗೋ ಪೂಜೆಗೆ ಚಾಲನೆ ನೀಡಿದರು.

ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಗೋಪೂಜೆಗೆ ಚಾಲನೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಗಳ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಗೋ ಪೂಜೆಗಳನ್ನು ಇಂದು ರಾಜ್ಯಾದ್ಯಂತ ನೆರವೇರಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದರು.

ಇದನ್ನು ಓದಿ:ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಹಿನ್ನೆಲೆ: ಮುಂದಿನ ನಡೆ ಬಗ್ಗೆ ಸಿಎಲ್​ಪಿ ಸಭೆಯಲ್ಲಿ ಚರ್ಚೆ

ಈ ವಿಧೇಯಕಕ್ಕೆ ಕಾಂಗ್ರೆಸ್​​ನವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್​ನವರದ್ದು ವಿರೋಧ ಮಾಡುವುದೇ ಕೆಲಸ. ಅವರು ಪ್ರತಿಪಕ್ಷವಾಗಿರುವುದರಿಂದ ಪ್ರತಿ ಒಳ್ಳೆಯ ಕೆಲಸಕ್ಕೂ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಟಾಂಗ್​ ಕೊಟ್ಟರು.

Last Updated : Dec 10, 2020, 12:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.