ETV Bharat / state

ಜ. 18 ರಿಂದ ರಾಜ್ಯದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಕಾಯ್ದೆ ಜಾರಿ - ಗೋಹತ್ಯೆ ನಿಷೇಧ ಕಾಯ್ದೆ

ಜನವರಿ 18 ರಿಂದ ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣವಾಗಿ ಜಾರಿಗೆ ಬರಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

cow slaughter bill to be implement from january 18 th
ಸಚಿವ ಪ್ರಭು ಚವ್ಹಾಣ್
author img

By

Published : Jan 16, 2021, 5:51 PM IST

ಬೆಂಗಳೂರು : ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದ್ದು, ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧವಾಗುತ್ತದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಯ್ದೆ ಸಂಪೂರ್ಣ ಜಾರಿಗೆ ಬರಲಿದೆ. ನಿಯಮಗಳನ್ನು ರೂಪಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಸದ್ಯದಲ್ಲೇ ಅವುಗಳನ್ನು ಬಿಡುಗಡೆ ಮಾಡಲಾಗುವುದು. ಜಾನುವಾರು ಸಾಗಾಣಿಕೆಗೆ ಸಂಬಂಧಿಸಿದಂತೆ ಕೂಡಲೇ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗಬಾರದು ಎಂದು ಪತ್ರಿಕಾ ಪ್ರಕಟಣೆ ಮೂಲಕ ಸಚಿವರು ರೈತರಲ್ಲಿ ಮನವಿ ಮಾಡಿದ್ದಾರೆ.

ಪೊಲೀಸ್ ಇಲಾಖೆಯು ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವ ಎನ್​ಜಿಓ ಹಾಗೂ ಪ್ರಾಣಿ ಕಲ್ಯಾಣ ಮಂಡಳಿಯ ಜೊತೆಗೆ ಕೈ ಜೋಡಿಸಲು ಹಾಗೂ ಎಲ್ಲಾ ಹಂತಗಳಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಅಲ್ಲದೆ ಗೋಹತ್ಯೆ, ಅಕ್ರಮ ಸಾಗಾಟದ ಮೇಲೆ ಪೊಲೀಸ್ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಗೆ ಹೆಚ್ಚು ನಿಗಾವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ. ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು ಎಂದು ಸಚಿವರು ತಿಳಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.